ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶವಸಂಸ್ಕಾರಕ್ಕೆ ಪರ್ಯಾಯ ವಿಧಾನ: ಅರ್ಜಿ ಪುರಸ್ಕರಿಸದ ಹಸಿರು ನ್ಯಾಯಮಂಡಳಿ

Last Updated 17 ಜುಲೈ 2020, 12:16 IST
ಅಕ್ಷರ ಗಾತ್ರ

ನವದೆಹಲಿ: ವಾಯುಮಾಲಿನ್ಯವನ್ನು ಕಡಿಮೆ ಮಾಡಲು ಹಾಗೂ ಕೋವಿಡ್‌–19 ಹಬ್ಬದಂತೆ ಶವಸಂಸ್ಕಾರಕ್ಕೆ ಪರ್ಯಾಯ ವಿಧಾನಗಳನ್ನು ನಿರ್ದೇಶಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಶುಕ್ರವಾರ ತಿರಸ್ಕರಿಸಿದೆ.

‘ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಕಾಯ್ದೆಯ 2010ರ ಸೆಕ್ಷನ್ 14 ಮತ್ತು 15ರ ಅಡಿಯಲ್ಲಿ ಇದು ಪರಿಸರಕ್ಕೆ ಸಂಬಂಧಿಸಿದ ಗಣನೀಯ ಪ್ರಶ್ನೆಯಾಗಿಲ್ಲ’ ಎಂದು ಎನ್‌ಜಿಟಿಯ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ್ ಕುಮಾರ್ ಗೋಯೆಲ್ ಅವರ ನೇತೃತ್ವದ ಪೀಠವು ಹೇಳಿದೆ.

ಆದಾಗ್ಯೂ, ‘ಅರ್ಜಿದಾರರು ಈ ವಿಷಯವನ್ನುಸಂಬಂಧಿಸಿದ ಅಧಿಕಾರಿಗಳ ಜತೆ ಚರ್ಚಿಸುವುದನ್ನು ತಡೆಯುವುದಿಲ್ಲ’ ಎಂದೂ ನ್ಯಾಯಪೀಠ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT