ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾರಾಂತ್ಯದ ಲಾಕ್‌ಡೌನ್‌ಗೆ ತರ್ಕವಿಲ್ಲ: ಪ್ರಿಯಾಂಕಾ ಗಾಂಧಿ

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ
Last Updated 13 ಜುಲೈ 2020, 12:15 IST
ಅಕ್ಷರ ಗಾತ್ರ

ನವದೆಹಲಿ:‘ವಾರಾಂತ್ಯದಲ್ಲಿ ಲಾಕ್‌ಡೌನ್‌ ಘೋಷಿಸಿರುವುದು ಮಕ್ಕಳಾಟದಂತಾಗಿದೆ. ಯಾರೊಬ್ಬರಿಗೂ ಅರ್ಥವಾಗುತ್ತಿಲ್ಲ. ಅದರಲ್ಲಿ ಯಾವುದೇ ತರ್ಕವೂ ಇಲ್ಲ’ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಟೀಕಿಸಿದ್ದಾರೆ.

ಸರ್ಕಾರ ತನ್ನ ವೈಫಲ್ಯಗಳನ್ನು ಮರೆಮಾಚಲು ಪ್ರಯತ್ನ ನಡೆಸುತ್ತಿದೆ ಎಂದು ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ನೇತೃತ್ವದ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸೋಂಕು ನಿಯಂತ್ರಣಕ್ಕಾಗಿ ವಾರಾಂತ್ಯದಲ್ಲಿ ರಾಜ್ಯದಾದ್ಯಂತ ಕಠಿಣ ಲಾಕ್‌ಡೌನ್‌ ಜಾರಿಗೊಳಿಸಲಾಗುವುದು ಎಂದು ಉತ್ತರ ಪ್ರದೇಶ ಸರ್ಕಾರ ಘೋಷಿಸಿರುವ ಹಿನ್ನೆಲೆಯಲ್ಲಿ ಪ್ರಿಯಾಂಕಾ ಈ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT