ಶನಿವಾರ, ಆಗಸ್ಟ್ 8, 2020
23 °C

ರಾಜಸ್ಥಾನ ರಾಜಕೀಯ | ಬಿಜೆಪಿ ಸೇರಲ್ಲ ಎಂದ ಸಚಿನ್ ಪೈಲಟ್

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Sachin pilot

ಜೈಪುರ: ರಾಜಸ್ಥಾನ ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ವಜಾಗೊಂಡಿರುವ ಸಚಿನ್‌ ಪೈಲಟ್‌ ಬಿಜೆಪಿ ಸೇರುವುದಿಲ್ಲ ಎಂದು ಬುಧವಾರ ಸ್ಪಷ್ಟಪಡಿಸಿದ್ದಾರೆ.

ಅಶೋಕ್ ಗೆಹ್ಲೋಟ್ ಸರ್ಕಾರದ ವಿರುದ್ಧ ಬಂಡೆದ್ದು ಬೆಂಬಲಿಗ ಶಾಸಕರ ಜತೆ ದೆಹಲಿಯಲ್ಲಿ ಬೀಡುಬಿಟ್ಟಿದ್ದ ಪೈಲಟ್ ಬಿಜೆಪಿ ಸೇರಲಿದ್ದಾರೆ ಎಂದು ಕಳೆದ ಕೆಲವು ದಿನಗಳಿಂದ ಸುದ್ದಿಯಾಗಿತ್ತು. ಕಾಂಗ್ರೆಸ್‌ ನಾಯಕರೂ ಪೈಲಟ್ ಮೇಲೆ ಇದೇ ಆರೋಪ ಮಾಡಿದ್ದರು. ಆದರೆ ಎಲ್ಲ ಊಹಾಪೋಹಗಳಿಗೆ ಈಗ ಪೈಲಟ್ ಅವರೇ ತೆರೆ ಎಳೆದಿದ್ದಾರೆ.

ನಾನು ಬಿಜೆಪಿ ಸೇರುತ್ತಿಲ್ಲ. ಆ ಕುರಿತ ವದಂತಿ ಹರಡುವವರು ನನ್ನ ವ್ಯಕ್ತಿತ್ವಕ್ಕೆ ಮಸಿಬಳಿಯಲು ಹಾಗೆ ಮಾಡುತ್ತಿದ್ದಾರೆ ಎಂದು ಪೈಲಟ್ ಹೇಳಿದ್ದಾರೆ. ಕಾಂಗ್ರೆಸ್ ವಿರುದ್ಧ ಬಿಜೆಪಿ ಮಾಡುತ್ತಿರುವ ಸಂಚಿನಲ್ಲಿ ಭಾಗಿಯಾಗಿರುವ ಬಗ್ಗೆ ಮಾಡಲಾಗುತ್ತಿರುವ ಆರೋಪಗಳನ್ನೂ ಅವರು ಅಲ್ಲಗಳೆದಿದ್ದಾರೆ.

ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಕಾಂಗ್ರೆಸ್‌ನ ಎರಡೂ ಶಾಸಕಾಂಗ ಪಕ್ಷದ ಸಭೆಗೆ ಪೈಲಟ್ ಹಾಜರಾಗಿರಲಿಲ್ಲ. ಹೀಗಾಗಿ ಅವರನ್ನು ಮಂಗಳವಾರ ವಜಾಗೊಳಿಸಲಾಗಿತ್ತು.

ಇದನ್ನೂ ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು