ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ ಸಿಎಂ ಅಶೋಕ್‌ ಗೆಹ್ಲೋಟ್‌, ಡಿಸಿಎಂ ಸಚಿನ್‌ ಪೈಲಟ್‌ಗೆ ಪೊಲೀಸ್ ನೋಟಿಸ್‌

Last Updated 11 ಜುಲೈ 2020, 14:08 IST
ಅಕ್ಷರ ಗಾತ್ರ

ಜೈಪುರ: ರಾಜ್ಯ ಸರ್ಕಾರವನ್ನು ಉರುಳಿಸಲು ನಡೆದಿರುವ ಪ್ರಯತ್ನಗಳ ಕುರಿತು ಹೇಳಿಕೆಯನ್ನು ದಾಖಲಿಸುವಂತೆ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಮತ್ತು ಉಪಮುಖ್ಯಮಂತ್ರಿ ಸಚಿನ್‌ ಪೈಲಟ್‌ ಅವರಿಗೆ ರಾಜಸ್ಥಾನ ಪೊಲೀಸರು ಶನಿವಾರ ನೋಟಿಸ್‌ ನೀಡಿದ್ದಾರೆ.

ವಿಶೇಷ ಕಾರ್ಯಾಚರಣೆ ಪಡೆಯು (ಎಸ್‌ಒಜಿ) ಈಗಾಗಲೇ ಆಡಳಿತ ಪಕ್ಷದ ಮುಖ್ಯ ಸಚೇತಕ (ಚೀಫ್‌ ವಿ‍ಪ್‌) ಮಹೇಶ್‌ ಜೋಶಿ ಅವರಿಗೆ ನೋಟಿಸ್‌ ನೀಡಿದೆ.

ಗೆಹ್ಲೋಟ್‌ ಅವರ ಸರ್ಕಾರವನ್ನು ಉರುಳಿಸಲು ಕಾಂಗ್ರೆಸ್‌ ಶಾಸಕರ ಖರೀದಿಗೆ ಕುದುರೆ ವ್ಯಾಪಾರ ನಡೆಸಿದ್ದರೆಂಬ ಆರೋಪ‍ದ ಮೇರೆಗೆ ಇಬ್ಬರು ವ್ಯಕ್ತಿಗಳ ವಿರುದ್ಧ ಎಸ್‌ಇಜಿಯು ಪ್ರಕರಣ ದಾಖಲಿಸಿ ವಶಕ್ಕೆ ಪಡೆದಿದೆ.

ಇನ್ನು 12ಕ್ಕೂ ಹೆಚ್ಚು ಶಾಸಕರಿಗೆ ನೋಟಿಸ್‌ ನೀಡಲಾಗುವುದು ಎಂದು ‘ಪಿಟಿಐ’ಗೆ ಮೂಲಗಳು ತಿಳಿಸಿವೆ. ಆದರೆ, ಶಾಸಕರ ಹೆಸರನ್ನು ಬಹಿರಂಗಪಡಿಸಲು ನಿರಾಕರಿಸಲಾಗಿದೆ. ಕುದುರೆ ವ್ಯಾಪಾರದಲ್ಲಿ ತೊಡಗಿರುವವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆ ಅಡಿ ಭ್ರಷ್ಟಾಚಾರ ನಿಗ್ರಹ ವಿಭಾಗ ತನಿಖೆ ನಡೆಸಲಿದೆ.

ಪ್ರಕರಣದಲ್ಲಿ ಬಂಧಿತರಾದವರು ಉದಯಪುರ, ಅಜ್ಮೀರ್ ಮೂಲದವರಾಗಿದ್ದಾರೆ ಎಂದು ಎಂದು ಎಸ್‌ಒಜಿ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT