ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update | ಆಂಧ್ರ ಪ್ರದೇಶದಲ್ಲಿ ಹೆಚ್ಚಿನ ಕೊರೊನಾ ಪ್ರಕರಣ ದೃಢ

ಒಂದೇ ದಿನ 775 ಮಂದಿ ಸಾವು
ಅಕ್ಷರ ಗಾತ್ರ

ನವದೆಹಲಿ:ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋವಿಡ್ -19 ಪ್ರಕರಣಗಳು 52,000ದ ಗಡಿ ದಾಟಿದ್ದು, ಗುರುವಾರ ದೇಶದಾದ್ಯಂತ ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯು 15.89 ಲಕ್ಷ ದಾಟಿದೆ. ದೇಶದಾದ್ಯಂತ ಹೊಸದಾಗಿ 775 ಜನರು ಪ್ರಾಣ ಕಳೆದುಕೊಂಡಿದ್ದು, ಮೃತರ ಸಂಖ್ಯೆ 34,968ಕ್ಕೆ ಏರಿಕೆಯಾಗಿದೆ.

ದೇಶಾದ್ಯಂತ ಈವರೆಗೆ 18,190,382 ಜನರ ಮಾದರಿ ಪರೀಕ್ಷೆಗಳನ್ನು ನಡೆಸಲಾಗಿದ್ದು, ನಿನ್ನೆ 4,46,642 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಐಸಿಎಂಆರ್ ತಿಳಿಸಿದೆ. ಮತ್ತೊಂದೆಡೆ, ಚೇತರಿಕೆ ಪ್ರಮಾಣವು ಕ್ರಮೇಣ ಸುಧಾರಿಸುವುದರೊಂದಿಗೆ ಭಾರತದಲ್ಲಿ ಸುಧಾರಿಸಿಕೊಂಡವರ ಸಂಖ್ಯೆಯು 10 ಲಕ್ಷ ದಾಟಿದೆ.

ಪಶ್ಚಿಮ ಬಂಗಾಳದಲ್ಲಿ ಈವರೆಗೆ 2,434 ಜನರಿಗೆ ಸೋಂಕು ತಗುಲಿದ್ದು, ಈವರೆಗೆ ಒಟ್ಟಾರೆ 67,692 ಕೊರೊನಾ ವೈರಸ್ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಹೊಸದಾಗಿ 46 ಜನರು ಮೃತಪಟ್ಟು, ಮೃತರ ಸಂಖ್ಯೆಯು 2,434ಕ್ಕೆ ಏರಿಕೆಯಾಗಿದೆ.

ಮಧ್ಯ ಪ್ರದೇಶದಲ್ಲಿ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಗುರುವಾರ 834 ಜನರಿಗೆ ಸೋಂಕು ದೃಢಪಟ್ಟಿದ್ದು, 13 ಜನರು ಸಾವಿಗೀಡಾಗಿದ್ದಾರೆ. ಇದರೊಂದಿಗೆ 21,657 ಜನರು ಗುಣಮುಖರಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆಯು 30,968ಕ್ಕೆ ಏರಿಕೆಯಾಗಿದೆ. 8,454 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 857 ಜನರು ಮೃತಪಟ್ಟಿದ್ದಾರೆ.

ಕೊರೊನಾ ವೈರಸ್ ಸೋಂಕಿನ ಹೊಡೆತಕ್ಕೆ ತುತ್ತಾಗಿರುವ ಮಹಾರಾಷ್ಟ್ರದಲ್ಲಿ ಹೊಸದಾಗಿ 266 ಜನರು ಮೃತಪಟ್ಟಿದ್ದು, 11,147 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಈವರೆಗೂ 4,11,798 ಜನರಿಗೆ ಸೋಂಕು ತಗುಲಿದ್ದು, ಜನರು ಗುಣಮುಖರಾಗಿದ್ದಾರೆ ಮತ್ತು 1,48,150 ಸಕ್ರಿಯ ಪ್ರಕರಣಗಳಿವೆ.

ರಾಜಧಾನಿ ದೆಹಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 1,093 ಹೊಸ ಪ್ರಕರಣಗಳೊಂದಿಗೆ 24 ಜನರು ಸಾವಿಗೀಡಾಗಿದ್ದಾರೆ. ಒಟ್ಟಾರೆ 1,34,403 ಮಂದಿಗೆ ಸೋಂಕು ತಗುಲಿದೆ. ಈ ಪೈಕಿ 1,19,724 ಜನರು ಗುಣಮುಖರಾಗಿದ್ದರೆ, 3,936 ಜನರು ಮೃತಪಟ್ಟಿದ್ದಾರೆ.

ಗುಜರಾತ್‌ನಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆಯು 60 ಸಾವಿರದ ಗಡಿ ದಾಟಿದ್ದು, ಕಳೆದ 24 ಗಂಟೆಗಳಲ್ಲಿ 1,159 ಜನರಿಗೆ ಸೋಂಕು ತಗುಲಿದೆ ಮತ್ತು 22 ಜನರು ಮೃತಪಟ್ಟಿದ್ದಾರೆ. ಈ ಮೂಲಕ 60,285 ಜನರಿಗೆ ಸೋಂಕು ತಗುಲಿದೆ. 13,793 ಸಕ್ರಿಯ ಪ್ರಕರಣಗಳಿದ್ದು, 44,074 ಮಂದಿ ಗುಣಮುಖರಾಗಿದ್ದಾರೆ. ಈವೆರೆಗೆ 2,418 ಜನರು ಕೊನೆಯುಸಿರೆಳೆದಿದ್ದಾರೆ.

ದಿನದಿಂದ ದಿನಕ್ಕೆ ಆಂಧ್ರ ಪ್ರದೇಶದಲ್ಲಿ ಸೋಂಕಿತರ ಸಂಖ್ಯೆಯು ಜಾಸ್ತಿಯಾಗುತ್ತಲೇ ಇದ್ದು, ಕಳೆದ 24 ಗಂಟೆಗಳಲ್ಲಿ 10,167 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆಯು 1,30,557ಕ್ಕೆ ಏರಿಕೆಯಾಗಿದೆ. ಒಟ್ಟಾರೆ 1,281 ಜನರು ಮೃತಪಟ್ಟಿದ್ದು, 60,024 ಜನರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT