ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೀಪಲ್ಸ್‌ ಕಾನ್ಫರೆನ್ಸ್‌ ಪಕ್ಷದ ನಾಯಕ ಸಾಜಾದ್‌ ಲೋನೆಗೆ ಗೃಹಬಂಧನದಿಂದ ಮುಕ್ತಿ

Last Updated 31 ಜುಲೈ 2020, 9:57 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೀಪಲ್ಸ್‌ ಕಾನ್ಫರೆನ್ಸ್‌ ಪಕ್ಷದ ನಾಯಕ ಸಾಜಾದ್‌ ಲೋನೆ ಅವರನ್ನು ಶುಕ್ರವಾರ ಗೃಹಬಂಧನದಿಂದ ಬಿಡುಗಡೆ ಮಾಡಲಾಗಿದೆ.

ಕಳೆದ ವರ್ಷ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ಹಾಗೂ 35–ಎ ಕಲಂ ರದ್ದು ಮಾಡಿದ ಬಳಿಕ ಕೇಂದ್ರ ಸರ್ಕಾರ ಸಾಜಾದ್‌ ಲೋನೆ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿತ್ತು.

6 ತಿಂಗಳು ಕಾಶ್ಮೀರದ ಶಾಸಕರ ಭವನದಲ್ಲಿ ಇರಿಸಲಾಗಿತ್ತು. ನಂತರ ಇಲ್ಲಿನ ಚರ್ಚ್‌ ಲೇನ್‌ನಲ್ಲಿರುವ ಸರ್ಕಾರಿ ಬಂಗಲೆಗೆ ಸ್ಥಳಾಂತರ ಮಾಡಲಾಗಿತ್ತು. ಒಂದು ವರ್ಷ ಪೂರೈಸಲು 5 ದಿನಗಳು ಬಾಕಿ ಇರುವಂತೆಯೇ ಸಾಜಾದ್‌ ಅವರನ್ನು ಗೃಹಬಂಧನದಿಂದ ಮುಕ್ತಗೊಳಿಸಲಾಗಿದೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ನನಗೆ ಜೈಲು ಹೊಸದಲ್ಲ, ಅಲ್ಲಿ ದೈಹಿಕ ಹಿಂಸೆ ನೀಡಲಾಗುತ್ತದೆ. ಆದರೆ ಇಲ್ಲಿ ಮಾನಸಿಕ ಕಿರುಕುಳ ನೀಡಲಾಗುತ್ತಿದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಸಾಜಾದ್‌ ಅವರು ಬಿಜೆಪಿ–ಪಿಡಿಪಿಯ ಮೈತ್ರಿ ಸರ್ಕಾರದ ಅವಧಿಯಲ್ಲಿ ಮಂತ್ರಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT