ಸೋಮವಾರ, ಸೆಪ್ಟೆಂಬರ್ 20, 2021
21 °C

ಮಗ ಅಪಾಯದಲ್ಲಿರುವುದಾಗಿ ಫೆ. 25ರಂದೇ ದೂರು ನೀಡಿದ್ದೆ: ಸುಶಾಂತ್‌ ತಂದೆ ಮಾಹಿತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಾಟ್ನಾ: ನಟ ಸುಶಾಂತ್‌ ಸಿಂಗ್‌ ರಜಪೂತ್‌ ಅಪಾಯದಲ್ಲಿರುವುದಾಗಿ ಫೆ. 25ರಂದೇ ದೂರು ನೀಡಿದ್ದೆ ಎಂದು ತಂದೆ ಕೆ.ಕೆ ಸಿಂಗ್‌ ಮಾಹಿತಿ ನೀಡಿದ್ದಾರೆ.

ಈ ಕುರಿತು ವಿಡಿಯೊ ಬಿಡುಗಡೆ ಮಾಡಿರುವ ಅವರು, ಸುಶಾಂತ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ತಾವು ಪಾಟ್ನಾದಲ್ಲಿ ಪ್ರತ್ಯೇಕ ದೂರು ನೀಡಿದ್ದು ಏಕೆಂಬುದರ ಬಗ್ಗೆ ತಿಳಿಸಿದ್ದಾರೆ.

ಸುಶಾಂತ್‌ ಅಪಾಯದಲ್ಲಿದ್ದಾನೆ ಎಂದು ನಾನು ಫೆ. 25ರಂದು ಬಾಂದ್ರಾ ಪೊಲೀಸರಿಗೆ ದೂರು ನೀಡಿದೆ. ಜೂನ್‌ 14ರಂದು ಆತ ಸಾವಿಗೀಡಾದ. ಫೆ. 25ರ ದೂರಿನಲ್ಲಿ ನಾನು ಉಲ್ಲೇಖಿಸಿದ್ದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾನು ಮನವಿ ಮಾಡಿದ್ದೆ. ಸುಶಾಂತ್‌ ಸತ್ತು 40 ದಿನಗಳ ನಂತರವೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ನಾನು ಪಾಟ್ನಾದಲ್ಲಿ ಎಫ್‌ಐಆರ್‌ ದಾಖಲು ಮಾಡಿದೆ,’ ಎಂದು ಸುಶಾಂತ್‌ ಸಿಂಗ್‌ ರಜಪೂತ್‌ ಅವರ ತಂದೆ ಕೆ.ಕೆ ಸಿಂಗ್‌ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು