ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾರುಯಿಪುರ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 100ಕ್ಕಿಂತಲೂ ಹೆಚ್ಚು ಅಂಗಡಿಗಳು ಭಸ್ಮ

Last Updated 4 ಆಗಸ್ಟ್ 2020, 12:21 IST
ಅಕ್ಷರ ಗಾತ್ರ

ಕೋಲ್ಕತ್ತ: ಪಶ್ಚಿಮ ಬಂಗಾಳದ ದಕ್ಷಿಣ 24 ಪರ್ಗನಾಸ್ ಜಿಲ್ಲೆಯ ಬಾರುಯಿಪುರ್ ನಗರದ ಮಾರುಕಟ್ಟೆಯಲ್ಲಿ ಮಂಗಳವಾರ ಬೆಂಕಿ ಅವಘಡ ಸಂಭವಿಸಿದ್ದು ನೂರಕ್ಕಿಂತಲೂ ಹೆಚ್ಚು ಅಂಗಡಿಗಳು ಸುಟ್ಟು ಭಸ್ಮವಾಗಿವೆ.

ಬಾರುಯಿಪುರ್ ಕಚಾರಿ ಬಜಾರ್‌ನ ಬಟ್ಟೆ ಗೋದಾಮಿನಲ್ಲಿ ತಡರಾತ್ರಿ 2 ಗಂಟೆ ಹೊತ್ತಿಗೆ ಬೆಂಕಿ ಕಾಣಿಸಿಕೊಂಡಿದ್ದು ಕೆಲವೇ ನಿಮಿಷಗಳಲ್ಲಿ ಇಡೀ ಮಾರುಕಟ್ಟೆಗೆ ಬೆಂಕಿ ವ್ಯಾಪಿಸಿಕೊಂಡಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಅದೇ ವೇಳೆಅಗ್ನಿಶಾಮಕ ದಳದವರು ತಡವಾಗಿ ಬಂದಿದ್ದರಿಂದಲೇ ಇಷ್ಟೊಂದು ನಾಶ ನಷ್ಟ ಸಂಭವಿಸಿದೆ ಎಂದು ಅಂಗಡಿ ಮಾಲೀಕರು ದೂರಿದ್ದಾರೆ.

ಮೊದಲಿಗೆ ಅಗ್ನಿಶಾಮಕ ದಳದ ಎರಡು ವಾಹನಗಳು ಘಟನಾಸ್ಥಳಕ್ಕೆ ಬಂದಿದ್ದು, ಬೆಂಕಿ ಹಬ್ಬುತ್ತಿದ್ದಂತೆ 11 ವಾಹನಗಳನ್ನು ಕಳುಹಿಸಲಾಗಿತ್ತು. ಘಟನಾ ಸ್ಥಳದ ಬಳಿ ನೀರಿಗೆ ಪರದಾಡಬೇಕಾದ ಪರಿಸ್ಥಿತಿ ಬಂದೊಗಿದ ಕಾರಣ ಬೆಂಕಿ ನಂದಿಸುವ ಕಾರ್ಯದಲ್ಲಿ ಅಡಚಣೆ ಆಯಿತು. ಆಮೇಲೆ 15 ಕಿಮೀ ದೂರದಿಂದ ನೀರಿನ ಟ್ಯಾಂಕರ್ ಬಳಸಿ ನೀರು ತಂದಿದ್ದೇವೆ.ಬೆಳಗ್ಗೆ 7 ಗಂಟೆ ಹೊತ್ತಿಗೆ ಬೆಂಕಿ ನಿಯಂತ್ರಣಕ್ಕೆ ಬಂದಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಹೇಳಿದ್ದಾರೆ.

ವಿದ್ಯುತ್ ಶಾರ್ಟ್ ಸೆರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ನೂರಕ್ಕಿಂತಲೂ ಹೆಚ್ಚು ಬಟ್ಟೆ ಅಂಗಡಿಗಳು ಸುಟ್ಟು ಹೋಗಿದ್ದು ಕೋಟಿ ರೂಪಾಯಿ ಮೌಲ್ಯದಷ್ಟು ನಾಶ ನಷ್ಟ ಸಂಭವಿಸಿದೆ ಎಂದು ವ್ಯಾಪಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT