ಬುಧವಾರ, ಆಗಸ್ಟ್ 5, 2020
22 °C

ಪಾಕಿಸ್ತಾನ | ರೈಲು, ಬಸ್‌ ಡಿಕ್ಕಿ: 29 ಸಿಖ್ ಯಾತ್ರಿಕರು ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಾಹೋರ್: ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದ ಮಾನವರಹಿತ ಕ್ರಾಸಿಂಗ್‌ನಲ್ಲಿ ಶುಕ್ರವಾರ ರೈಲು ಮತ್ತು ಮಿನಿ ಬಸ್‌ ಡಿಕ್ಕಿಯಾಗಿ  29 ಮಂದಿ ಮೃತಪಟ್ಟಿದ್ದಾರೆ.

ಪಂಜಾಬ್‌ನ ನಂಕಾನಾ ಸಾಹಿಬ್‌ನಿಂದ ಹಿಂತಿರುಗುತ್ತಿದ್ದ ಸಿಖ್‌ ಯಾತ್ರಾರ್ಥಿಗಳಿದ್ದ ಮಿನಿ ಬಸ್‌, ಕರಾಚಿಯಿಂದ ಲಾಹೋರ್‌ಗೆ ಬರುತ್ತಿದ್ದ  ಷಾ ಹುಸೇನ್‌ ಏಕ್ಸ್‌ಪ್ರೆಸ್‌ಗೆ ಫಾರೂಕ್‌ಬಾದ್‌ನಲ್ಲಿ ಡಿಕ್ಕಿ ಹೊಡೆಯಿತು. ಕನಿಷ್ಠ 29 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ರಕ್ಷಣಾ ತಂಡ, ಗಾಯಾಳುಗಳನ್ನು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಿತು. ರೈಲ್ವೆ ವಿಭಾಗೀಯ ಎಂಜಿನಿಯರ್‌ನನ್ನು ಕರ್ತವ್ಯದಿಂದ ಅಮಾನತು ಮಾಡಲಾಗಿದ್ದು, ವಿಚಾರಣೆ ಆರಂಭಿಸಲಾಗಿದೆ ಎಂದು ರೈಲ್ವೆ ತಿಳಿಸಿದೆ.

ಪ್ರಧಾನಿ ಇಮ್ರಾನ್‌ ಖಾನ್‌ ಅಪಘಾತದ ಬಗ್ಗೆ ಶೋಕ ವ್ಯಕ್ತಪಡಿಸಿದ್ದಾರೆ.

ನರೇಂದ್ರ ಮೋದಿ ಸಂತಾಪ

ಪಾಕಿಸ್ತಾನದಲ್ಲಿ ನಡೆದ ಅಪಘಾತದಲ್ಲಿ ಸಿಖ್ ಯಾತ್ರಿಕರು ಮೃತಪಟ್ಟಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು