ಮಂಗಳವಾರ, ಆಗಸ್ಟ್ 4, 2020
26 °C

ಚೆನ್ನೈನಲ್ಲಿ ಜುಲೈ 6ರ ನಂತರ ಲಾಕ್‌ಡೌನ್ ‌ಸಡಿಲಿಕೆ: ತಮಿಳುನಾಡು ಸಿಎಂ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚೆನ್ನೈ: ಚೆನ್ನೈನಲ್ಲಿ ಜುಲೈ 6ರಿಂದ ಲಾಕ್‌ಡೌನ್‌ ಸಡಿಲಿಸಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಡಪ್ಪಾಡಿ ಕೆ.ಪಳನಿಸ್ವಾಮಿ ಘೋಷಿಸಿದ್ದಾರೆ. ಜೊತೆಗೆ ನಗರದ ಎಲ್ಲ ತರಕಾರಿ ಮತ್ತು ದಿನಸಿ ಅಂಗಡಿಗಳನ್ನು 12 ಗಂಟೆ ಕಾಲ ತೆರೆಯಲಾಗುವುದು ಎಂದು ತಿಳಿಸಿದ್ದಾರೆ

‘ಚೆನ್ನೈನಲ್ಲಿ ಲಾಕ್‌ಡೌನ್‌ ಸಡಿಲಿಕೆ ಜುಲೈ 6ರಿಂದ ಜಾರಿಗೆ ಬರಲಿದೆ. ತರಕಾರಿ ಮತ್ತು ದಿನಸಿ ಅಂಗಡಿಗಳು ಬೆಳಗ್ಗೆ 6ರಿಂದ ಸಂಜೆ 6ರ ವರೆಗೆ ತೆರೆಯಲು ಅವಕಾಶವಿರುತ್ತದೆ. ಹಾರ್ಡ್‌ವೇರ್‌ ಶಾಪ್‌ಗಳು ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ಮತ್ತು ರೆಸ್ಟೋರೆಂಟ್‌ಗಳು ಬೆಳಗ್ಗೆ 6ರಿಂದ ರಾತ್ರಿ 9ರ ವರೆಗೆ ತೆರೆದಿರಲಿವೆ’ ಎಂದು ತಿಳಿಸಿದ್ದಾರೆ.

ತಮಿಳುನಾಡಿನಲ್ಲಿ ಕೋವಿಡ್‌–19 ಸೋಂಕು ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಿದ್ದ ಕಾರಣ ಚೆನ್ನೈ, ತಿರುವಳ್ಳೂರು‌, ಚೆಂಗಲ್‌ಪಟ್ಟು ಮತ್ತು ಕಾಂಚೀಪುರಂನಲ್ಲಿ ಜೂನ್‌ 19ರಿಂದ ಸಂಪೂರ್ಣ ಲಾಕ್‌ಡೌನ್‌ ಘೋಷಿಸಲಾಗಿತ್ತು. ತಮಿಳುನಾಡಿನಲ್ಲಿ ಇದುವರೆಗೆ 1,02,721 ಜನರಲ್ಲಿ ಸೋಂಕು ಇರುವುದು ಖಚಿತವಾಗಿದೆ. ಇದರಲ್ಲಿ 1,385 ಸೋಂಕಿತರು ಮೃತಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು