ಭಾನುವಾರ, ಆಗಸ್ಟ್ 1, 2021
23 °C

ಎನ್‌ಎಲ್‌ಎಸ್‌ಐಯು: ಮೀಸಲಾತಿಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಅರ್ಜಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬೆಂಗಳೂರಿನ ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಸ್ಥಳೀಯರಿಗೆ ಶೇಕಡ 25ರಷ್ಟು ಮೀಸಲಾತಿ ನೀಡುವ ಕರ್ನಾಟಕ ಸರ್ಕಾರದ ನಿರ್ಧಾರದ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. 

ಗುರುವಾರ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡ ಮುಖ್ಯನ್ಯಾಯಮೂರ್ತಿ ಡಿ.ಎನ್‌. ಪಟೇಲ್‌ ಮತ್ತು ನ್ಯಾಯಮೂರ್ತಿ ಪ್ರತೀಕ್‌ ಜಲನ್‌ ಅವರಿದ್ದ ಪೀಠ, ಪ್ರಕರಣದ ವಿಚಾರಣೆಯನ್ನು ಮತ್ತೊಂದು ಪೀಠಕ್ಕೆ ವರ್ಗಾಯಿಸುವಂತೆ ನಿರ್ದೇಶಿಸಿತು. 

ಈ ಪ್ರಕರಣವು ವಿಚಾರಣೆಗೆ ಬಂದಾಗ ಅರ್ಜಿದಾರರ ಪರ ವಕೀಲರು, ‘ದೆಹಲಿಯ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದಲ್ಲಿ ಜಾರಿಗೆ ತಂದಿದ್ದ ಇದೇ ರೀತಿಯ ಮೀಸಲಾತಿ ಸೌಲಭ್ಯವನ್ನು ಇನ್ನೊಂದು ಪೀಠ ಇತ್ತೀಚೆಗೆ ತಡೆಹಿಡಿದಿತ್ತು’ ಎಂದು ವಿವರಿಸಿದರು. 

ನ್ಯಾಷನಲ್‌ ಲಾ ಸ್ಕೂಲ್‌ ಆಫ್‌ ಇಂಡಿಯಾ ಯೂನಿವರ್ಸಿಟಿಯಲ್ಲಿ ಸ್ಥಳೀಯರಿಗೆ ಮೀಸಲಾತಿ ಸಂಬಂಧಿತ ತಿದ್ದುಪಡಿ ಮಸೂದೆಗೆ ‌2020 ಮಾರ್ಚ್‌ ತಿಂಗಳಿನಲ್ಲಿ ಕರ್ನಾಟಕ ವಿಧಾನಸಭೆಯಲ್ಲಿ ಅಂಗೀಕಾರ ದೊರಕಿದ್ದು, ಕಳೆದ ಮೇ ತಿಂಗಳಲ್ಲಿ ಮಸೂದೆಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು