ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಕೈಗೊಂಡ ಕೋವಿಡ್‌ ನಿಯಂತ್ರಣಾ ಕ್ರಮಗಳಿಗೆ ಮೋದಿ ಮೆಚ್ಚುಗೆ

Last Updated 11 ಜುಲೈ 2020, 14:23 IST
ಅಕ್ಷರ ಗಾತ್ರ

ನವದೆಹಲಿ:ದೆಹಲಿಯಲ್ಲಿ ಕೋವಿಡ್‌–19 ನಿರ್ವಹಿಸುವಲ್ಲಿ ಕೇಂದ್ರ, ರಾಜ್ಯ ಮತ್ತು ಸ್ಥಳೀಯ ಅಧಿಕಾರಿಗಳ ಕಾರ್ಯವನ್ನು ಪ್ರಧಾನಿ ನರೇಂದ್ರಮೋದಿ ಶ್ಲಾಘಿಸಿದ್ದು, ರಾಷ್ಟ್ರೀಯ ರಾಜಧಾನಿಯ ಇತರೆ ಪ್ರದೇಶಗಳಲ್ಲಿಯೂ ಇದೇ ಮಾದರಿ ವಿಧಾನವನ್ನು ಅನುಸರಿಸಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

ಸೋಂಕು ವ್ಯಾಪಕವಾಗಿರುವ ರಾಜ್ಯ ಮತ್ತು ಪ್ರದೇಶಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿನ ನೈಜ ಪ್ರಕರಣಗಳ ನಿರ್ವಹಣೆ ಮತ್ತು ಮಾರ್ಗದರ್ಶನ ನೀಡಬೇಕು ಎಂದು ಮೋದಿ ನಿರ್ದೇಶನ ನೀಡಿದರು.

ದೇಶದ ವಿವಿಧ ಭಾಗಗಳಲ್ಲಿನ ಕೋವಿಡ್‌–19 ಪರಿಸ್ಥಿತಿ ಮತ್ತು ಬಿಕ್ಕಟ್ಟು ಎದುರಿಸಲು ರಾಜ್ಯಗಳು ನಡೆಸಿರುವ ಸಿದ್ಧತೆಯ ಕುರಿತು ನಡೆಸಿದಪರಿಶೀಲನಾಸಭೆಯಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆಮತ್ತು ಸಾಮಾಜಿಕ ಶಿಸ್ತು ಪಾಲಿಸುವ ಅಗತ್ಯವನ್ನು ಪ್ರಧಾನಿ ಈ ಸಂದರ್ಭದಲ್ಲಿ ಪುನರುಚ್ಚರಿಸಿದ್ಧಾರೆ.

ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಆರೋಗ್ಯ ಸಚಿವ ಹರ್ಷ ವರ್ಧನ್‌ ಮತ್ತು ಮತ್ತು ಕ್ಯಾಬಿನೆಟ್‌ ಕಾರ್ಯದರ್ಶಿ ಸಭೆಯಲ್ಲಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT