ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಬಿಕ್ಕಟ್ಟು | ಪ್ರಧಾನಿ ಮೋದಿ –ಪುಟಿನ್‌ ಮಾತುಕತೆ

Last Updated 2 ಜುಲೈ 2020, 20:47 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಗುರುವಾರ ದೂರವಾಣಿ ಮೂಲಕ ಮಾತುಕತೆ ನಡೆಸಿ ಕೋವಿಡ್‌ ಬಿಕ್ಕಟ್ಟು ಕುರಿತು ಸಮಾಲೋಚನೆ ನಡೆಸಿದರು.

ಕೋವಿಡ್‌ ನಿಯಂತ್ರಿಸಿದ ಬಳಿಕ ಜಗತ್ತಿನಲ್ಲಿ ಎದುರಾಗುವ ಸವಾಲುಗಳನ್ನು ಜಂಟಿಯಾಗಿ ಎದುರಿಸುವ ನಿಟ್ಟಿನಲ್ಲಿ ಉಭಯ ನಾಯಕರು ಚರ್ಚಿಸಿದರು ಎಂದು ಪ್ರಧಾನಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

‘ಅಧ್ಯಕ್ಷ ಪುಟಿನ್‌ ಮತ್ತು ನಾನು ನಿರಂತರ ಸಮಾಲೋಚನೆ ನಡೆಸಲು ನಿರ್ಧರಿಸಿದ್ದೇವೆ. ಈ ವರ್ಷದ ಅಂತ್ಯಕ್ಕೆ ನಡೆಯಲಿರುವ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪುಟಿನ್‌ ಅವರು ಭಾರತಕ್ಕೆ ಆಗಮಿಸಲಿದ್ದಾರೆ’ ಎಂದು ಮೋದಿ ಅವರು ಟ್ವೀಟ್‌ ಮಾಡಿದ್ದಾರೆ.

ಸ್ಮಾರಕಗಳು ವೀಕ್ಷಣೆಗೆ ಮುಕ್ತ
ನವದೆಹಲಿ (ಪಿಟಿಐ): ಆಗ್ರಾದ ತಾಜ್‌ಮಹಲ್, ದೆಹಲಿಯ ಕೆಂಪುಕೋಟೆ ಸೇರಿದಂತೆ ದೇಶದ ಪ್ರಮುಖ ಸ್ಮಾರಕಗಳು ಪ್ರವಾಸಿಗರ ವೀಕ್ಷಣೆಗೆ ಸೋಮವಾರದಿಂದ (ಜುಲೈ 6) ತೆರೆಯಲಿವೆ. ಭಾರತೀಯ ಪುರಾತತ್ವ ಸಂಸ್ಥೆಯ (ಎಎಸ್‌ಐ) ಉಸ್ತುವಾರಿಯಲ್ಲಿರುವ ಪ್ರವಾಸಿ ತಾಣಗಳು ಸಾರ್ವಜನಿಕರಿಗೆ ತೆರೆಯಲಿವೆ ಎಂದು ಸಂಸ್ಕೃತಿ ಸಚಿವಾಲಯ ತಿಳಿಸಿದೆ.

ಪ್ರವಾಸಿಗರಿಗೆ ಮಾಸ್ಕ್ ಕಡ್ಡಾಯ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT