ಭಾನುವಾರ, ಆಗಸ್ಟ್ 1, 2021
25 °C

ಇಸಿಒಎಸ್‌ಒಸಿ: ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಭಾಷಣ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ವಿಶ್ವಸಂಸ್ಥೆಯ ಅಂಗ ಸಂಸ್ಥೆಯಾದ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯ (ಇಸಿಒಎಸ್‌ಒಸಿ) ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮೋದಿ ಅವರು ಶುಕ್ರವಾರ ಮಾತನಾಡಲಿದ್ದಾರೆ. ಭದ್ರತಾ ಮಂಡಳಿಯಲ್ಲಿ ತಾತ್ಕಾಲಿಕ ಸದಸ್ಯ ರಾಷ್ಟ್ರವಾಗಿ ಭಾರತ ಆಯ್ಕೆ ಆದ ಬಳಿಕ ಇದೇ ಮೊದಲ ಬಾರಿಗೆ ಇಂತಹ ಐತಿಹಾಸಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ಅವಕಾಶ ಒದಗಿ ಬಂದಿದೆ.

ಶುಕ್ರವಾರ ಆನ್‌ಲೈನ್‌ ಮೂಲಕ ನಡೆಯಲಿರುವ ಶೃಂಗ ಸಭೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದಾರೆ. ಈ ವೇಳೆ ವಿಶ್ವಸಂಸ್ಥೆಯ 75ನೇ ವಾರ್ಷಿಕೋತ್ಸವದಲ್ಲಿ ಕೋವಿಡ್‌–19ನಿಂದಾಗಿ ಎದುರಾಗಿರುವ ಸಮಸ್ಯೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು, ಅಪೌಷ್ಟಿಕತೆ ಸಮಸ್ಯೆ ನಿವಾರಣೆಗೆ ಯಾವ ರೀತಿಯ ಕ್ರಮ ತೆಗೆದುಕೊಳ್ಳಬಹುದು ಎಂಬುದರ ಬಗ್ಗೆ ಚರ್ಚೆ ನಡೆಯಲಿದೆ. 

ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ನಾರ್ವೇಜಿಯನ್‌ ಪ್ರಧಾನಿ ಎರ್ನಾ ಸೋಲ್ಬರ್ಗ್ ಹಾಗೂ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರೆಸ್ ಮಾತನಾಡಲಿದ್ದಾರೆ.

ಈ ಶೃಂಗಸಭೆಯಲ್ಲಿ ಉನ್ನತ ಮಟ್ಟದ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗುತ್ತದೆ. ಇದರಲ್ಲಿ ಸರ್ಕಾರಿ, ಖಾಸಗಿ, ಅಕಾಡೆಮಿಕ್‌ ವಲಯದ ಪ್ರತಿನಿಧಿಗಳು ಭಾಗವಹಿಸುತ್ತಾರೆ. 2016ರಲ್ಲಿ ಇಸಿಒಎಸ್‌ಒಸಿಯ 70ನೇ ವಾರ್ಷಿಕೋತ್ಸವದಲ್ಲೂ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದ್ದರು.

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು