ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉದ್ಯೋಗದಾತರ ಸೃಷ್ಟಿಸಲಿದೆ ಹೊಸ ಶಿಕ್ಷಣ ನೀತಿ: ಪ್ರಧಾನಿ ನರೇಂದ್ರ ಮೋದಿ

Last Updated 1 ಆಗಸ್ಟ್ 2020, 16:30 IST
ಅಕ್ಷರ ಗಾತ್ರ

ನವದೆಹಲಿ: ಹೊಸ ಶಿಕ್ಷಣ ನೀತಿಯು ಉದ್ಯೋಗ ಹುಡುಕುವವರನ್ನು ಸಿದ್ಧಪಡಿಸುವ ಬದಲು ಉದ್ಯೋಗ ಸೃಜಿಸುವವರ ಸೃಷ್ಟಿಗೆ ಒತ್ತು ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

‘ಸ್ಮಾರ್ಟ್ ಇಂಡಿಯಾ ಹ್ಯಾಕಾಥಾನ್’ ಉದ್ದೇಶಿಸಿ ಮಾತನಾಡಿದ ಅವರು, ‘ಅಂತರ-ಶಿಸ್ತಿನ ಅಧ್ಯಯನವು ವಿದ್ಯಾರ್ಥಿಯು ಕಲಿಯಲು ಬಯಸುವ ವಿಷಯಗಳ ಮೇಲೆ ಕೇಂದ್ರೀಕರಿಸಿದೆ ಎಂಬುದನ್ನು ಹೊಸ ಶಿಕ್ಷಣ ನೀತಿ ಖಚಿತಪಡಿಸುತ್ತದೆ’ ಎಂದು ಹೇಳಿದ್ದಾರೆ.

ಬಡವರಿಗೆ ಉತ್ತಮ ಜೀವನ ಕಲ್ಪಿಸುವ ಸಲುವಾಗಿ ‘ಸುಲಭ ಜೀವನ ವಿಧಾನ’ ಗುರಿಯನ್ನು ಸಾಧಿಸುವಲ್ಲಿ ಯುವಕರ ಪಾತ್ರ ಬಹುಮುಖ್ಯ ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮೋದಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT