ಶನಿವಾರ, ಜೂನ್ 19, 2021
23 °C

ಕೇದಾರನಾಥ ಅಭಿವೃದ್ಧಿ: ಪ್ರಧಾನಿ ಪರಿಶೀಲನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಕೇದಾರನಾಥ ಧಾಮ‌ ಅಭಿವೃದ್ಧಿ ಮತ್ತು ಪ್ರಯಾಣಿಕ ಸೌಲಭ್ಯಗಳ ಪ್ರಗತಿ ಪರಿಶೀಲನೆ ನಡೆಸಿದರು.

ಕೇದರನಾಥ ದೇವಸ್ಥಾನ ಮತ್ತು ಜಗದ್ಗುರು ಆದಿ ಶಂಕರಾಚಾರ್ಯರ ಸಮಾಧಿ ಸ್ಥಳದಲ್ಲಿ ಸ್ವಚ್ಛತೆ ಕಾಪಾಡಿಕೊಳ್ಳುವುದರ ಜೊತೆಗೆ ಸಮಗ್ರ ಅಭಿವೃದ್ಧಿ ಕುರಿತು ಚರ್ಚಿಸಲಾಗಿದೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. 

ಗೌರಿಕುಂಡ್‌– ಕೇದರನಾಥ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸೌಲಭ್ಯಗಳನ್ನು ದೊರೆಯುವಂತೆ ನೋಡಿಕೊಳ್ಳುವುದರ ಜೊತೆಗೆ ತಂತ್ರಜ್ಞಾನವನ್ನು ಬಳಸಿಕೊಂಡು ಈ ಸ್ಥಳದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಸಾರುವ ವ್ಯವಸ್ಥೆ ಕಲ್ಪಿಸುವ ಕುರಿತು ಚರ್ಚೆ ನಡೆಯಿತು ಎಂದು ಹೇಳಲಾಗಿದೆ.  

ಕಳೆದ ತಿಂಗಳು ಕೂಡ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಿಶೀಲಿಸಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು