ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಶ್ಮೀರ | ಅಕ್ರಮ ಶಸ್ತ್ರಾಸ್ತ್ರ ವಶ: ಮೂವರ ಬಂಧನ

ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ
Last Updated 26 ಜುಲೈ 2020, 19:30 IST
ಅಕ್ಷರ ಗಾತ್ರ

ಶ್ರೀನಗರ: ಶಸ್ತ್ರಾಸ್ತ್ರ ಮತ್ತು ಮಾದಕ ವಸ್ತು ಕಳ್ಳ ಸಾಗಣೆ ಪ್ರಕರಣದಡಿ ಮೂವರನ್ನು ಬಂಧಿಸಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭಾನುವಾರ ತಿಳಿಸಿದ್ದಾರೆ.

‘ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ಸಾಧನ ಟಾಪ್‌ನಲ್ಲಿ ಪಹರೆಯಲ್ಲಿದ್ದ ಸೇನೆ ಹಾಗೂ ಪೊಲೀಸರನ್ನೊಳಗೊಂಡ ತಂಡವು ವಾಹನ ತಪಾಸಣೆ ನಡೆಸುತ್ತಿತ್ತು. ಈ ವೇಳೆ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ 10 ಕೆ.ಜಿ. ಬ್ರೌನ್ ‌ಶುಗರ್‌, ಎಕೆ 47 ರೈಫಲ್‌, ಎರಡು ಪಿಸ್ತೂಲ್‌, 20 ಗ್ರೆನೇಡ್‌ ಹಾಗೂ ಇತರೆ ಸ್ಫೋಟಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಎರಡು ವಾಹನಗಳನ್ನೂ ಜಪ್ತಿ ಮಾಡಲಾಗಿದೆ. ಇದರಲ್ಲಿ ಇನ್ನಷ್ಟು ಮಂದಿ ಶಾಮೀಲಾಗಿರುವ ಸಾಧ್ಯತೆ ಇದೆ. ಅವರ ಬಂಧನಕ್ಕೆ ಬಲೆ ಬೀಸಿದ್ದೇವೆ’ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ಟ್ವೀಟ್‌ ಮಾಡಿದೆ.

ಜೂನ್‌ 11ರಂದು ಹಂದ್ವಾರ‌ ಪ್ರದೇಶದಲ್ಲಿ ಪಾಕಿಸ್ತಾನ ಪ್ರಾಯೋಜಿತ ಮಾದಕ ವಸ್ತು,ಭಯೋತ್ಪಾದನೆ ಜಾಲವನ್ನು ಬೇಧಿಸಿದ್ದ ಜಮ್ಮು ಮತ್ತುಕಾಶ್ಮೀರ ಪೊಲೀಸರು, ಲಷ್ಕರ್‌ ಎ ತೈಬಾ ಉಗ್ರ ಸಂಘಟನೆಯ ಮೂವರನ್ನು ಬಂಧಿಸಿದ್ದರು. ಅವರಿಂದ ₹100 ಕೋಟಿ ಮೌಲ್ಯದ 21 ಕೆ.ಜಿ. ಹೆರಾಯಿನ್‌ ಹಾಗೂ ₹1.33 ಕೋಟಿ ನಗದು ವಶಕ್ಕೆ ಪಡೆದಿದ್ದರು.ಜೂನ್ 23ರಂದು ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸಲಾಗಿತ್ತು.

ಹಿಂದಿನ 18 ತಿಂಗಳುಗಳಲ್ಲಿ ಪಾಕಿಸ್ತಾನದ ನುಸುಳುಕೋರರಿಂದಲೇ ಶೇ 80 ರಷ್ಟು ಮಾದಕ ವಸ್ತು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT