ಭಾನುವಾರ, ಆಗಸ್ಟ್ 1, 2021
27 °C

ರಾಮ ಮಂದಿರ ಶಿಲಾನ್ಯಾಸ ಅತ್ಯಂತ ಸಂತಸದ ವಿಚಾರ: ಯುಪಿ ಮಾಜಿ ಸಿಎಂ ಕಲ್ಯಾಣ್ ಸಿಂಗ್‌

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಲಖನೌ: ಆಗಸ್ಟ್ 5 ರಂದು ನಡೆಯಲಿರುವ ಅಯೋಧ್ಯೆಯ ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಅತ್ಯಂತ ಸಂತಸ ತಂದಿದೆ ಎಂದು ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ ತಿಳಿಸಿದ್ದಾರೆ. 

ಈ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಅವರು, 'ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಶಿಲಾನ್ಯಾಸ ಸಮಾರಂಭದಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ. ಆಗಸ್ಟ್ 4ರಂದು ನಾನು ಅಯೋದ್ಯೆಗೆ ತಲುಪಿ, ಮರುದಿನ ನಡೆಯುವ ಸಮಾರಂಭದಲ್ಲಿ ಭಾಗವಹಿಸಲಿದ್ದೇನೆ. ಇದು ನನಗೆ ಅತ್ಯಂತ ಸಂಸತ ತರುವ ವಿಚಾರವಾಗಿದೆ' ಎಂದು ಕಲ್ಯಾಣ್‌ ಸಿಂಗ್‌ ಹೇಳಿದ್ದಾರೆ. 

1992ರಲ್ಲಿ ಕರಸೇವಕರು ಬಾಬರಿ ಮಸೀದಿ ನೆಲಸಮಗೊಳಿಸಿದ ಸಂದರ್ಭದಲ್ಲಿ ಕಲ್ಯಾಣ್ ಸಿಂಗ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಿದ್ದರು. ಇದೇ ಕಾರಣಕ್ಕೆ ನ್ಯಾಯಾಂಗ ನಿಂದನೆಯ ವಿಚಾರವಾಗಿ ಸುಪ್ರೀಂ ಕೋರ್ಟ್ ಸಿಂಗ್‌ ಅವರಿಗೆ ದಂಡ ವಿಧಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು