ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಸ್ಸಾಂಗೆ ನೆರವು: ಪ್ರಧಾನಿ ನರೇಂದ್ರ ಮೋದಿ ಭರವಸೆ

Last Updated 19 ಜುಲೈ 2020, 9:31 IST
ಅಕ್ಷರ ಗಾತ್ರ

ಗೌಹಾಟಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಅಸ್ಸಾಂ ಮುಖ್ಯಮಂತ್ರಿ ಸರ್ವಾನಂದ ಸೋನವಾಲ್‌ ಜತೆ ವಿಡಿಯೊ ಸಂಭಾಷಣೆ ನಡೆಸಿ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದರು. ರಾಜ್ಯಕ್ಕೆ ಅಗತ್ಯವಾದ ಎಲ್ಲಾ ನೆರವನ್ನು ನೀಡುವುದಾಗಿ ಅವರು ಭರವಸೆ ನೀಡಿದರು.

ಅಸ್ಸಾಂನಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯಿಂದಾಗಿ ಸುಮಾರು 27 ಲಕ್ಷ ಜನರು ತೊಂದರೆಗೆ ಸಿಲುಕಿದ್ದು, 81 ಜನರು ಮೃತರಾಗಿದ್ದಾರೆ.

‘ಪ್ರವಾಹ ಪರಿಸ್ಥಿತಿ, ಕೋವಿಡ್‌ ಸ್ಥಿತಿಗತಿ ಹಾಗೂ ತೈಲಬಾವಿ ಅಗ್ನಿ ಕುರಿತು ಪ್ರಧಾನಿ ಮೋದಿ ಅವರು ಮಾಹಿತಿ ಪಡೆದಿದ್ದಾರೆ. ಜನರಿಗೆ ಧೈರ್ಯ ತುಂಬಿರುವ ಅವರು, ರಾಜ್ಯಕ್ಕೆ ಎಲ್ಲಾ ನೆರವನ್ನೂ ನೀಡುವುದಾಗಿ ಹೇಳಿದ್ದಾರೆ’ ಎಂದು ಮುಖ್ಯಮಂತ್ರಿ ಟ್ವೀಟ್‌ ಮಾಡಿದ್ದಾರೆ.

ಪ್ರಸಕ್ತ ಸಾಲಿನಲ್ಲಿ ಭೂಕುಸಿತ ಹಾಗೂ ಪ್ರವಾಹದಿಂದಾಗಿ ಅಸ್ಸಾಂನಲ್ಲಿ ಒಟ್ಟು 107 ಜನರು ಮೃತಪಟ್ಟಿದ್ದಾರೆ. ಈಗ ಉಂಟಾಗಿರುವ ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾಗೂ ಅನೇಕ ಮನೆಗಳಿಗೆ ಹಾನಿಯಾಗಿದೆ.

ರಾಜ್ಯದಲ್ಲಿ 22,981 ಕೋವಿಡ್‌ ಪ್ರಕರಣಗಳಿದ್ದು, ಈವರೆಗೆ 53 ಮಂದಿ ಅಸುನೀಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT