ಶನಿವಾರ, ಜುಲೈ 24, 2021
28 °C

ಮಹಿಳಾ ಅಧಿಕಾರಿ ಆತ್ಮಹತ್ಯೆ: ಪಾರದರ್ಶಕವಾಗಿ ತನಿಖೆಯಾಗಲಿ– ಪ್ರಿಯಾಂಕಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಉತ್ತರ ಪ್ರದೇಶದ ಮನಿಯಾ ನಗರ ಪಂಚಾಯತ್‌ ಕಾರ್ಯನಿರ್ವಹಣಾ ಅಧಿಕಾರಿ ಮಣಿ ಮಂಜರಿ ರೈ ಆತ್ಮಹತ್ಯೆ ಪ್ರಕರಣ ಕುರಿತು ಪಾರದರ್ಶಕವಾಗಿ ತನಿಖೆ ನಡೆಸಬೇಕು ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಒತ್ತಾಯಿಸಿದ್ದಾರೆ.

ಮಣಿ ಮಂಜರಿ ಅವರನ್ನು ಬಾಲಿಯಾಗೆ ವರ್ಗಾಯಿಸಲಾಗಿತ್ತು. ಈ ವೇಳೆ ಅವರು ಇಲಾಖೆಯ ಕಾರ್ಯವೈಖರಿ ಬಗ್ಗೆ ಪ್ರಶ್ನಿಸಿದ್ದರು ಎಂದು ಪ್ರಿಯಾಂಕಾ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಪ್ರಿಯಾಂಕಾ, ‘ಮಣಿ ಮಂಜರಿಯ ಕುಟುಂಬದ ಸದಸ್ಯರು ಪ್ರಕರಣದ ಬಗ್ಗೆ ಪಾರದರ್ಶಕ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ. ಈ ಬಗ್ಗೆ ನಾನು, ಉತ್ತರ ಪ್ರದೇಶದ ಮುಖ್ಯಮಂತ್ರಿ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದೇನೆ’ ಎಂದು ಹೇಳಿದ್ದಾರೆ.

ಮಣಿ ಮಂಜರಿ ರೈ(27) ಕಳೆದ ಸೋಮವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ತಂದೆ ಇದು ಕೊಲೆ ಪ್ರಕರಣ ಎಂದು ದೂರಿದ್ದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು