ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉತ್ತರ ಪ್ರದೇಶದಲ್ಲಿ ಪತ್ರಕರ್ತನ ಮೇಲೆ ದಾಳಿ; ಪ್ರಿಯಾಂಕಾ ಗಾಂಧಿ ಖಂಡನೆ

Last Updated 21 ಜುಲೈ 2020, 10:23 IST
ಅಕ್ಷರ ಗಾತ್ರ

ನವದೆಹಲಿ:ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದುಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಟೀಕಿಸಿದ್ದು, ಘಾಜಿಯಾಬಾದ್‍ನಲ್ಲಿ ಪತ್ರಕರ್ತರೊಬ್ಬರ ಮೇಲಿನಗುಂಡಿನ ದಾಳಿಯನ್ನು ಖಂಡಿಸಿದ್ದಾರೆ.

ಘಾಜಿಯಾಬಾದ್‍ ಎನ್‍.ಸಿ.ಆರ್ ವ್ಯಾಪ್ತಿಗೆ ಬರಲಿದ್ದು, ಕಾನೂನು ಸುವ್ಯವಸ್ಥೆ ರಾಜ್ಯದ ವ್ಯಾಪ್ತಿಯಲ್ಲಿಯೇ ಇದೆ. ಕಿಡಿಗೇಡಿಗಳು ತನ್ನ ಸಂಬಂಧಿಯೊಬ್ಬರಿಗೆ ಕಿರುಕುಳ ನೀಡಿದ ಕುರಿತು ಪೊಲೀಸರಿಗೆ ದೂರು ನೀಡಿದ್ದಕ್ಕೇ ಪತ್ರಕರ್ತನ ಮೇಲೆ ದಾಳಿ ನಡೆದಿದೆ.ಇನ್ನು ಸಾಮಾನ್ಯ ಜನರು ಎಷ್ಟು ಸುರಕ್ಷಿತ ಎಂದು ಅವರು ಪ್ರಶ್ನಿಸಿದ್ದಾರೆ.

ಈ ಮಧ್ಯೆ, ಪತ್ರಕರ್ತನ ಮೇಲಿನ ದಾಳಿ ಸಂಬಂಧ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT