ಮಂಗಳವಾರ, ಏಪ್ರಿಲ್ 20, 2021
27 °C

ಲೋಧಿ ಎಸ್ಟೇಟ್‌ ಬಂಗಲೆ ತೊರೆದ ಪ್ರಿಯಾಂಕಾ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಲೋಧಿ ಎಸ್ಟೇಟ್‌ ಬಂಗಲೆಯನ್ನು ಗುರುವಾರ ತೆರವುಗೊಳಿಸಿದ್ದಾರೆ. 

ಪ್ರಿಯಾಂಕಾ ಅವರ ಹೊಸ ಮನೆಯ ನವೀಕರಣ ಕಾರ್ಯ ನಡೆಯುತ್ತಿದ್ದು, ಮಧ್ಯ ದೆಹಲಿಗೆ ಸ್ಥಳಾಂತರಗೊಳ್ಳುವ ಮೊದಲು ಅವರು ಗುರುಗ್ರಾಮದಲ್ಲಿರುವ ಪೆಂಟ್‌ಹೌಸ್‌ನಲ್ಲಿ ಕೆಲವು ದಿನಗಳ ಕಾಲ ತಂಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಎಸ್‌ಪಿಜಿ ಭದ್ರತೆಯನ್ನು ರದ್ದು ಮಾಡಿರುವ ಹಿನ್ನೆಲೆಯಲ್ಲಿ ಒಂದು ತಿಂಗಳೊಳಗೆ ದೆಹಲಿಯ ಲುಟಿಯೆನ್ಸ್ ಪ್ರದೇಶದಲ್ಲಿರುವ ಬಂಗಲೆಯನ್ನು ತೆರವು ಮಾಡುವಂತೆ ಪ್ರಿಯಾಂಕಾ ಗಾಂಧಿ ಅವರಿಗೆ ಜುಲೈ 1ರಂದು ಸರ್ಕಾರ ಸೂಚಿಸಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು