ಗುರುವಾರ , ಜೂನ್ 17, 2021
22 °C

ಪಾಕ್‌ ಬೆಂಬಲಿತ ಮಾದಕ ವಸ್ತು, ಶಸ್ತ್ರಾಸ್ತ್ರ ಕಳ್ಳಸಾಗಣೆ ದಂಧೆ ಪತ್ತೆ; ಮೂವರ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಮೃತ್‌‌ಸರ್‌: ಪಾಕಿಸ್ತಾನ ಬೆಂಬಲಿತ ಮಾದಕ ವಸ್ತು ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆ ದಂಧೆಯನ್ನು ಪಂಜಾಬ್ ಪೊಲೀಸರು ಪತ್ತೆ ಹಚ್ಚಿದ್ದಾರೆ. 

ಘಟನೆಗೆ ಸಂಬಂಧಿಸಿದಂತೆ ಇಬ್ಬರು ಕಳ್ಳಸಾಗಾಣಿಕೆದಾರರು ಮತ್ತು ಗಡಿ ಭದ್ರತಾ ಪಡೆಯ ಯೋಧರೊಬ್ಬರನ್ನು ಬಂಧಿಸಲಾಗಿದೆ. 

ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಪಂಜಾಬ್‌ನ ತರ್ನ್‌ ತರಾನ್‌ ಜಿಲ್ಲೆಯಲ್ಲಿ ಕಳ್ಳಸಾಗಣೆ ನಡೆಯುತ್ತಿತ್ತು ಎಂದು ಪಂಜಾಬ್‌ನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ. 

ಬಂಧಿತ ಮೂವರು ಆರೋಪಿಗಳನ್ನು ಸುಮ್‌ರೇಲ್‌ ಸಿಂಗ್, ಗುರ್‌ಜಂತ್‌ ಸಿಂಗ್ ಮತ್ತು ಯೋಧ ರಾಜೇಂದ್ರ ಪ್ರಸಾದ್‌ ಎಂದು ಗುರುತಿಸಲಾಗಿದೆ. 

ಆರೋಪಿಗಳಿಂದ 30 ಪಿಸ್ತೂಲ್ (ಚೀನಾದಲ್ಲಿ ತಯಾರಿಸಲ್ಪಟ್ಟಿದ್ದು), 5 ಸಜೀವ ಗುಂಡುಗಳು ಮತ್ತು ₹ 24.50 ಲಕ್ಷ ಹಣವನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು