ಮಂಗಳವಾರ, ಆಗಸ್ಟ್ 3, 2021
26 °C

ದೇಶವೇ ಅಸ್ಸಾಂ ಜೊತೆಗಿದೆ: ರಾಹುಲ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಭೀಕರ ಪ್ರವಾಹ ಪರಿಸ್ಥಿತಿ ಎದುರಿಸುತ್ತಿರುವ ಅಸ್ಸಾಂ ಜೊತೆಗೆ ಇಡೀ ದೇಶವೇ ಇದೆ. ಪ್ರಕೃತಿ ವಿಕೋಪದಿಂದ ಎದುರಾಗಿರುವ ಸಂಕಷ್ಟವನ್ನು ಅಲ್ಲಿಯ ಜನರು ಸಮರ್ಥವಾಗಿ ಎದುರಿಸಲಿದ್ದಾರೆ’ ಎಂಬ ವಿಶ್ವಾಸವನ್ನು ಸಂಸದ ರಾಹುಲ್‌ ಗಾಂಧಿ ವ್ಯಕ್ತಪಡಿಸಿದ್ದಾರೆ.

ಪ್ರವಾಹ ಸಂತ್ರಸ್ತರಿಗೆ ಅಗತ್ಯ ನೆರವು ನೀಡುವಂತೆ ಅವರು ಇದೇ ವೇಳೆ ಕಾಂಗ್ರೆಸ್‌ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ. 

ರಾಜ್ಯದಲ್ಲಿ ಭಾರಿ ಮಳೆಯಿಂದ ಉಂಟಾಗಿರುವ ಪ್ರವಾಹದಿಂದಾಗಿ 35 ಲಕ್ಷಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ. ಪ್ರವಾಹ ಮತ್ತು ಭೂಕುಸಿತದಿಂದಾಗಿ ರಾಜ್ಯದಲ್ಲಿ ಈ ವರ್ಷ 102ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು