ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತ ದಂಪತಿಯ ಮೇಲೆ ಹಲ್ಲೆ: ರಾಹುಲ್‌ ಗಾಂಧಿ ಖಂಡನೆ

Last Updated 16 ಜುಲೈ 2020, 13:58 IST
ಅಕ್ಷರ ಗಾತ್ರ

ನವದೆಹಲಿ: ಮದ್ಯಪ್ರದೇಶದ ಗುಣ ಜಿಲ್ಲೆಯಲ್ಲಿ ದಲಿತ ದಂಪತಿ ಮೇಲೆ ಪೊಲೀಸರು ಹಲ್ಲೆ ನಡೆಸಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಈ ಘಟನೆಯನ್ನು ಖಂಡಿಸಿದ್ದಾರೆ.

ರಾಹುಲ್‌ ಗಾಂಧಿ ಈ ವಿಡಿಯೊವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ನಮ್ಮ ಹೋರಾಟ ಅನ್ಯಾಯದ ವಿರುದ್ಧ ಎಂದಿದ್ದಾರೆ.

‘ರಾಜಕುಮಾರ್‌ ಅಹಿರವಾರ್‌‌ ಮತ್ತು ಅವರ ಪತ್ನಿ ಸಾವಿತ್ರಿ ಸರ್ಕಾರಕ್ಕೆ ಸೇರಿದ್ದ ಸ್ಥಳದಲ್ಲಿ ಬೆಳೆ ಬೆಳೆದಿದ್ದರು. ಆದರೆ, ಆ ಜಾಗವನ್ನು ಕಾಲೇಜಿಗಾಗಿ ಗೊತ್ತುಪಡಿಸಲಾಗಿತ್ತು. ಹಾಗಾಗಿ ಸ್ಥಳವನ್ನು ಖಾಲಿ ಮಾಡುವಂತೆ ನಾವು ಸೂಚಿಸಿದಾಗ ಪತಿ–ಪತ್ನಿ ಕೀಟನಾಶಕವನ್ನು ಕುಡಿದಿದ್ದಾರೆ. ದಂಪತಿ ಆಸ್ಪತ್ರೆಗೆ ಬರಲು ಒಪ್ಪದಿದ್ದಾಗ ಅವರಿಬ್ಬರನ್ನು ಬಲವಂತವಾಗಿ ಕರೆದುಕೊಂಡು ಹೋಗಬೇಕಾಯಿತು ಎಂದು ಜಿಲ್ಲಾಧಿಕಾರಿ ಎಸ್‌. ವಿಶ್ವನಾಥನ್‌ ಅವರು ತಿಳಿಸಿದರು.

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಈ ಪ್ರಕರಣವನ್ನು ಬಹಳ ಗಂಭೀರವಾಗಿ ಪರಿಗಣಿಸಿದ್ದು, ಅಲ್ಲಿನ ಜಿಲ್ಲಾಧಿಕಾರಿ ಮತ್ತುಪೊಲೀಸ್ ವರಿಷ್ಠಾಧಿಕಾರಿಯನ್ನು ವರ್ಗಾವಣೆ ಮಾಡಲು ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT