ಬುಧವಾರ, ಜುಲೈ 28, 2021
21 °C

ಪರೀಕ್ಷೆ ರದ್ದುಪಡಿಸಿ: ಯುಜಿಸಿಗೆ ರಾಹುಲ್ ಗಾಂಧಿ ಒತ್ತಾಯ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ರದ್ದುಪಡಿಸಿ, ವಿದ್ಯಾರ್ಥಿಗಳ ಹಿಂದಿನ ಸಾಧನೆಗಳ ಆಧಾರದಲ್ಲಿ ಅವರನ್ನು ಉತ್ತೀರ್ಣಗೊಳಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ವಿಶ್ವವಿದ್ಯಾಲಯ ಅನುದಾನ ಆಯೋಗಕ್ಕೆ ಶುಕ್ರವಾರ (ಯುಜಿಸಿ) ಮನವಿ ಮಾಡಿದ್ದಾರೆ.

‘ಕೋವಿಡ್‌ ಸಂದರ್ಭದಲ್ಲಿ ಪರೀಕ್ಷೆಗಳನ್ನು ನಡೆಸುವುದು ಸರಿಯಾದ ಕ್ರಮ ಅಲ್ಲ. ವಿದ್ಯಾರ್ಥಿಗಳ ಬೇಡಿಕೆಗಳನ್ನು ಯುಜಿಸಿ ಆಲಿಸಬೇಕು. ಐಐಟಿ ಹಾಗೂ ಇತರ ಕಾಲೇಜುಗಳ ವಿದ್ಯಾರ್ಥಿಗಳನ್ನು ಪರೀಕ್ಷೆಗಳಿಲ್ಲದೇ, ಹಿಂದಿನ ಸಾಧನೆಗಳ ಆಧಾರದಲ್ಲಿ ಉತ್ತೀರ್ಣಗೊಳಿಸಿರುವಾಗ, ಅನಗತ್ಯವಾಗಿ ಗೊಂದಲ ಸೃಷ್ಟಿಸುವ ಬದಲು ಯುಜಿಸಿಯು ಸಹ ಇದೇ ಮಾದರಿಯನ್ನು ಅನುಸರಿಸಬೇಕು ಎಂದು ಅವರು ಕಾಂಗ್ರೆಸ್‌ ಆಯೋಜಿಸಿದ್ದ ‘ಸ್ಪೀಕ್‌ಅಪ್‌ ಫಾರ್‌ ಸ್ಟೂಡೆಂಟ್ಸ್‌’ ವಿಡಿಯೊ ಸಂವಾದದಲ್ಲಿ ಮಾತನಾಡುತ್ತಾ ಹೇಳಿದರು.

 

 

ಈ ಸಂವಾದದ ಕಿರು ವಿಡಿಯೊ ಒಂದನ್ನು ಅವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು