ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆಚ್ಚುತ್ತಿರುವ ಕೋವಿಡ್-19: ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ಧಾಳಿ

Last Updated 4 ಆಗಸ್ಟ್ 2020, 3:43 IST
ಅಕ್ಷರ ಗಾತ್ರ

ನವದೆಹಲಿ: ಸತತ ಐದನೇ ದಿನವೂ ದೇಶವು 50,000ಕ್ಕೂ ಹೆಚ್ಚು ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಸೋಮವಾರ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ. 'ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರಗಳನ್ನು ತೆಗೆದುಕೊಂಡರೆ ಭಾರತ ಉತ್ತಮವಾಗಿರುತ್ತದೆ' ಎಂದು ಕಿಡಿಕಾರಿದ್ದಾರೆ.

ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಕೊರಾನಾ ವೈರಸ್ ಪ್ರಕರಣಗಳು ವರದಿಯಾಗಿರುವ 10 ದೇಶಗಳ ಪಟ್ಟಿಯಲ್ಲಿ ಭಾರತವನ್ನು ಅಗ್ರಸ್ಥಾನದಲ್ಲಿ ತೋರಿಸುತ್ತಿರುವ ಗ್ರಾಫ್‌ಅನ್ನು ರಾಹುಲ್ ಗಾಂಧಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಸೋಮವಾರ ದೇಶದಾದ್ಯಂತ 52,972 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆಯು 18 ಲಕ್ಷವನ್ನು ದಾಟಿದೆ.

'ಸರಿಯಾದ ಸಮಯದಲ್ಲಿ ಸರಿಯಾದ ನಿರ್ಧಾರಗಳು ಎಂದರೆ ಭಾರತವು ಇತರ ದೇಶಗಳಿಗಿಂತ ಉತ್ತಮವಾಗಿರುತ್ತದೆ. ಪ್ರಧಾನಿಗಳೇ' ಎಂದು ಗಾಂಧಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಭಾರತದ ನಂತರ, ಗ್ರಾಫ್‌ನಲ್ಲಿ ಅಮೆರಿಕದಲ್ಲಿ 47,511 ಪ್ರಕರಣಗಳು, ಬ್ರೆಜಿಲ್ 25,800 ಪ್ರಕರಣಗಳು, ಪೆರು 21,358 ಪ್ರಕರಣಗಳು ಮತ್ತು ಕೊಲಂಬಿಯಾ 11,470 ಕೋವಿಡ್ ಪ್ರಕರಣಗಳನ್ನು ಕಳೆದ 24 ಗಂಟೆಗಳಲ್ಲಿ ತೋರಿಸಿದೆ.

ಕೋವಿಡ್‌ನಿಂದ ಚೇತರಿಸಿಕೊಂಡ ರೋಗಿಗಳ ಸಂಖ್ಯೆಯೂ ದೇಶದಲ್ಲಿ 11.86 ಲಕ್ಷಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಕೊರೊನಾ ವೈರಸ್ ರೋಗವನ್ನು ನಿಭಾಯಿಸಿದ ಬಗೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಸರ್ಕಾರದ ಮೇಲೆ ವಾಗ್ಧಾಳಿ ನಡೆಸಿರುವ ರಾಹುಲ್, ನಿರೀಕ್ಷಿತ ಫಲಿತಾಂಶಗಳನ್ನು ನೀಡುವಲ್ಲಿ ರಾಷ್ಟ್ರವ್ಯಾಪಿ ಹೇರಿದ್ದ ಲಾಕ್‌ಡೌನ್ ವಿಫಲವಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಕಾಂಗ್ರೆಸ್ ಅಧಿಕೃತ ಟ್ವಿಟರ್ ಖಾತೆಯಲ್ಲಿ, ನಾವು ಇತರ ದೇಶಗಳಿಗಿಂತ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಪದೇ ಪದೇ ಹೇಳುವ ಬದಲು ಸರ್ಕಾರವು ನಿಜವಾಗಿಯೂ ಪರಿಸ್ಥಿತಿಯನ್ನು ನಿಭಾಯಿಸಬೇಕಾಗಿದೆ. ಸರ್ಕಾರದ ಈ ನಿರಾಕರಣೆಯು ನಿರಂತರವಾಗಿ ಲಕ್ಷಾಂತರ ಜೀವಗಳನ್ನು ಅಪಾಯಕ್ಕೆ ದೂಡುತ್ತಿದೆ ಎಂದು ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT