ಬುಧವಾರ, ಆಗಸ್ಟ್ 4, 2021
21 °C

ರಾಜಸ್ಥಾನ ರಾಜಕೀಯ | ಪೈಲೆಟ್‌ಗೆ ನೋಟಿಸ್‌: ಸಭಾಧ್ಯಕ್ಷರ ನಡೆ ಪ್ರಶ್ನಿಸಿದ ಬಿಜೆಪಿ

ಪಿಟಿಐ Updated:

ಅಕ್ಷರ ಗಾತ್ರ : | |

ಜೈಪುರ: ಪಕ್ಷದ ಶಾಸಕಾಂಗ ಸಭೆಗೆ ಗೈರಾದರು ಎಂಬ ಕಾರಣಕ್ಕೆ ಕಾಂಗ್ರೆಸ್‌ನ ಬಂಡಾಯ ಮುಖಂಡ ಸಚಿನ್‌ ಪೈಲಟ್‌ ಹಾಗೂ ಅವರ ಬೆಂಬಲಿಗರಿಗೆ ಸಭಾಧ್ಯಕ್ಷರು ಅನರ್ಹತೆಯ ನೋಟಿಸ್‌ ಜಾರಿ ಮಾಡಿರುವುದನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸತೀಶ್‌ ಪೂನಿಯಾ ಪ್ರಶ್ನಿಸಿದ್ದಾರೆ.

ಕಾಂಗ್ರೆಸ್‌ ಪಕ್ಷದ ಆಗ್ರಹದ ಮೇರೆಗೆ ರಾಜಸ್ಥಾನದ ಸಭಾಧ್ಯಕ್ಷರು ಅನರ್ಹತೆಯ ನೋಟಿಸ್‌ ನೀಡಿದ್ದರು. ಈ ನೋಟಿಸ್‌ಗೆ ಶುಕ್ರವಾರದೊಳಗೆ ಉತ್ತರಿಸಲು ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ‘ಶಾಸಕಾಂಗ ಸಭೆಗೆ ಹಾಜರಾಗಿಲ್ಲ ಎಂಬ ಕಾರಣಕ್ಕೆ ಅನರ್ಹತೆಯ ನೋಟಿಸ್‌ ನೀಡಿದ್ದಾರೆ. ಇದು ಕಾರಣವೇ ಅಲ್ಲ. ವಿಧಾನಸಭೆ ಸಭಾಧ್ಯಕ್ಷರ ದುರುದ್ದೇಶವನ್ನು ತೋರಿಸುತ್ತದೆ. ಸಾಂವಿಧಾನಿಕ ಮಿತಿ ಮೀರದಂತೆ ಬಿಜೆಪಿ ನೋಡಿಕೊಳ್ಳಲಿದೆ’ ಎಂದರು. 

ಪಕ್ಷದ ವಿಪ್‌ ಉಲ್ಲಂಘನೆಯಾದಲ್ಲಿ ಮಾತ್ರ ಸಭಾಧ್ಯಕ್ಷರು ಶಾಸಕರ ಮೇಲೆ ಕ್ರಮ ಕೈಗೊಳ್ಳಲು ಅವಕಾಶವಿರುತ್ತದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಗುಲಾಬ್‌ ಚಂದ್‌ ಕಠಾರಿಯಾ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು