ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ ಬಿಕ್ಕಟ್ಟು: ಬಿಎಸ್‌ಪಿಯ 6 ಶಾಸಕರು, ಸ್ಪೀಕರ್‌ಗೆ ಹೈಕೋರ್ಟ್ ನೊಟೀಸ್

Last Updated 30 ಜುಲೈ 2020, 15:02 IST
ಅಕ್ಷರ ಗಾತ್ರ

ಜೈಪುರ: ಬಿಎಸ್‌ಪಿಯಿಂದ ಟಿಕೆಟ್ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದ ನಂತರ ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವ ಪಕ್ಷಾಂತರಗೊಂಡಿರುವ ಆರು ಜನ ಶಾಸಕರು, ವಿಧಾನಸಭೆ ಸ್ಪೀಕರ್, ರಾಜ್ಯ ಕಾರ್ಯದರ್ಶಿ ಮತ್ತು ಆರು ಜನ ಶಾಸಕರಿಗೆ ರಾಜಸ್ಥಾನ ಹೈಕೋರ್ಟ್ ಗುರುವಾರ ನೊಟೀಸ್ ಜಾರಿ ಮಾಡಿದೆ.

ಬಿಎಸ್‌ಪಿಯ ಆರು ಜನ ಶಾಸಕರು ಕಾಂಗ್ರೆಸ್‌ನೊಂದಿಗೆ ವಿಲೀನಗೊಂಡಿರುವುದನ್ನು ಪ್ರಶ್ನಿಸಿ ಬಹುಜನ ಸಮಾಜ ಪಾರ್ಟಿ (ಬಿಎಸ್‌ಪಿ) ಮತ್ತು ಬಿಜೆಪಿ ಶಾಸಕ ಮದನ್ ದಿಲಾವರ್ ಸಲ್ಲಿಸಿದ್ದ ರಿಟ್ ಅರ್ಜಿಗಳನ್ನು ಆಲಿಸಿದ ನ್ಯಾಯಮೂರ್ತಿ ಮಹೇಂದ್ರ ಕುಮಾರ್ ಗೋಯಲ್ ಅವರ ನ್ಯಾಯಪೀಠ ನೊಟೀಸ್ ನೀಡಿದೆ.

ವಿಧಾನಸಭಾ ಸ್ಪೀಕರ್, ಕಾರ್ಯದರ್ಶಿ ಮತ್ತು ಆರು ಶಾಸಕರಿಗೆ ನೋಟಿಸ್ ನೀಡಲಾಗಿದ್ದು, ಅವರು ಆಗಸ್ಟ್ 11 ರೊಳಗೆ ತಮ್ಮ ಉತ್ತರಗಳನ್ನು ಸಲ್ಲಿಸಬೇಕು ಎಂದು ಶಾಸಕ ದಿಲಾವರ್ ಪರ ವಕೀಲರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬಿಎಸ್‌ಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೊಳ್ಳುವುದರ ವಿರುದ್ಧ ಮಾರ್ಚ್‌ನಲ್ಲಿ ಸಲ್ಲಿಸಿದ್ದ ದೂರನ್ನು ತಿರಸ್ಕರಿಸುವ ಸ್ಪೀಕರ್ ಅವರ ಜುಲೈ 24 ರ ನಿರ್ಧಾರವನ್ನು ದಿಲಾವರ್ ಅವರು ತಮ್ಮ ಅರ್ಜಿಯಲ್ಲಿ ಪ್ರಶ್ನಿಸಿದ್ದಾರೆ.

ಮುಂದಿನ ವಿಚಾರಣೆಯನ್ನು ಆಗಸ್ಟ್ 11ಕ್ಕೆ ಕೈಗೆತ್ತಿಕೊಳ್ಳಲಿದೆ.

ಬಿಎಸ್‌ಪಿ ಶಾಸಕರು ಕಾಂಗ್ರೆಸ್‌ನೊಂದಿಗೆ ವಿಲೀನಗೊಂಡ ಬಳಿಕ 200 ಸದಸ್ಯ ಬಲದ ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಸದಸ್ಯ ಸಂಖ್ಯೆ 107ಕ್ಕೆ ಏರಿಕೆಯಾಗಿದ್ದು, ಅಶೋಕ್ ಗೆಹ್ಲೋಟ್ ನೇತೃತ್ವದ ರಾಜಸ್ಥಾನ ಸರ್ಕಾರಕ್ಕೆ ಬಲ ಬಂದಂತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT