ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಸ್ಪೀಕರ್ ಸಿ.ಪಿ. ಜೋಶಿ ರಾಜೀನಾಮೆಗೆ ಬಿಜೆಪಿ ಆಗ್ರಹ

Last Updated 31 ಜುಲೈ 2020, 6:55 IST
ಅಕ್ಷರ ಗಾತ್ರ

ಜೈಪುರ: ರಾಜಕೀಯ ಒಲವು ಬಹಿರಂಗಗೊಂಡಿರುವ ಹಿನ್ನೆಲೆಯಲ್ಲಿ ವಿಧಾನಸಭೆ ಸ್ಪೀಕರ್ ಸಿ.ಪಿ.ಜೋಶಿ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರ ಉಳಿಸುವಲ್ಲಿ ಜೋಶಿ ಅವರ ರಾಜಕೀಯ ಒಲವು ಬಹಿರಂಗಗೊಂಡಿದೆ. ನೈತಿಕ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕು ಎಂದು ಬಿಜೆಪಿಯ ರಾಜಸ್ಥಾನ ಘಟಕದ ಅಧ್ಯಕ್ಷ ಸತೀಶ್ ಪೂನಿಯಾ ಹೇಳಿದ್ದಾರೆ.

ರಾಜ್ಯ ರಾಜಕೀಯಕ್ಕೆ ಸಂಬಂಧಿಸಿ ಜೋಶಿ ಮತ್ತು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್‌ ನಡುವೆ ನಡೆದಿದೆ ಎನ್ನಲಾದ ಸಂಭಾಷಣೆಯ ವಿಡಿಯೊ ವೈರಲ್ ಆದ ಕುರಿತು ಪೂನಿಯಾ ಉಲ್ಲೇಖಿಸಿದ್ದಾರೆ. ವಿಧಾನಸಭೆಯ 30 ಸದಸ್ಯರು ಸ್ಥಾನ ತ್ಯಜಿಸಿದರೆ ಬಿಕ್ಕಟ್ಟು ಇನ್ನಷ್ಟು ಹೆಚ್ಚಾಗಬಹುದು ಎಂದು ಸ್ಪೀಕರ್ ಅವರು ವೈಭವ್‌ ಬಳಿ ಹೇಳಿರುವುದು ವಿಡಿಯೊದಲ್ಲಿದೆ.

ಜೋಶಿ ಅವರು ಗೆಹ್ಲೋಟ್ ಸರ್ಕಾರದ ಬಗ್ಗೆ ಹೆಚ್ಚು ಕಾಳಜಿ ವಹಿಸಿದ್ದು, ಸಾಂವಿಧಾನಿಕ ಅಧಿಕಾರ ಬಳಸಿಕೊಂಡು ಸರ್ಕಾರ ಉಳಿಸಲು ಮುಂದಾಗಿದ್ದಾರೆ ಎಂದು ಪೂನಿಯಾ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT