ಜೈಪುರ: ರಾಜಸ್ಥಾನ ಕಾಂಗ್ರೆಸ್ ಶಾಸಕಾಂಗ ಪಕ್ಷವು ಮಂಗಳವಾರ ಮತ್ತೊಮ್ಮೆ ಸಭೆ ಸೇರಲಿದ್ದು, ಇದರ ಬೆನ್ನಲ್ಲೇ ಉಪಮುಖ್ಯಮಂತ್ರಿ ಸಚಿನ್ ಪೈಲಟ್ 16 ಶಾಸಕರೊಂದಿಗೆ ದೆಹಲಿಯಲ್ಲಿ ಬೀಡುಬಿಟ್ಟಿರುವ ವಿಡಿಯೊವೊಂದನ್ನು ಬಿಡುಗಡೆ ಮಾಡಿದ್ದಾರೆ.

10 ಸೆಕೆಂಡ್ಗಳ ವಿಡಿಯೊದಲ್ಲಿ ಶಾಸಕರು ಒಟ್ಟಾಗಿ ಕುಳಿತುಕೊಂಡಿರುವ ದೃಶ್ಯ ಸೆರೆಯಾಗಿದೆ. ಶಾಸಕರಾದ ಇಂದ್ರರಾಜ್ ಗುರ್ಜರ್, ಮುಖೇಶ್ ಭಾಕರ್, ಹರೀಶ್ ಮೀನಾ ಸೇರಿದಂತೆ ಇತರರು ಇದ್ದಾರೆ.

ಈ ವಿಡಿಯೊ ಹಂಚಿಕೊಂಡಿರುವಪ್ರವಾಸೋದ್ಯಮ ಸಚಿವ ವಿಶ್ವೇಂದ್ರ ಸಿಂಗ್, ‘ಫ್ಯಾಮಿಲಿ’ಎಂದು ಬರೆದುಕೊಂಡಿದ್ದಾರೆ.

ರಾಜಸ್ಥಾನ ಕಾಂಗ್ರೆಸ್ ಶಾಸಕಾಂಗ ಪಕ್ಷದ 106 ಶಾಸಕರ ಬೆಂಬಲ ಹೊಂದಿರುವ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಸಚಿನ್ ಎದುರು ಮೇಲುಗೈ ಸಾಧಿಸಲಿದ್ದಾರೆ ಎಂದು ಹೇಳಲಾಗಿದೆ.

ಸೋಮವಾರ ನಡೆದ ಸಭೆಯಲ್ಲಿ ಸರ್ಕಾರದ ಪರ 106 ಶಾಸಕರು ಹಾಜರಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ. ಸಭೆಯ ಬಳಿಕ ಈ ಶಾಸಕರು ಜೈಪುರ ಸಮೀಪದ ರೆಸಾರ್ಟ್ನಲ್ಲಿ ತಂಗಿದ್ದಾರೆ.

ಪೈಲಟ್ ಮತ್ತು ಅವರ ಪರವಾಗಿರುವ ಶಾಸಕರು ಸಭೆಗೆ ಗೈರುಹಾಜರಾಗಿದ್ದರು. ಪೈಲಟ್ ಅವರು ತಮ್ಮ ಬೆಂಬಲಿಗರಾದ 16 ಶಾಸಕರ ಜತೆಗೆ ದೆಹಲಿಯಲ್ಲಿಯೇ ವಾಸ್ತವ್ಯ ಹೂಡಿದ್ದಾರೆ.

ಇದನ್ನೂ ಓದಿ...ರಾಜಸ್ಥಾನ ರಾಜಕೀಯ ಬಿಕ್ಕಟ್ಟು | ಕಾಂಗ್ರೆಸ್ ಬೇರು –ಚಿಗುರಿನ ಹಗ್ಗಜಗ್ಗಾಟ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.