ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೈಲಟ್ ಬೆಂಬಲಿಗ ವಿಶ್ವೇಂದ್ರ ಸಿಂಗ್, ಭನ್ವರ್‌ ಲಾಲ್ ಕಾಂಗ್ರೆಸ್‌ನಿಂದ ಅಮಾನತು

Last Updated 17 ಜುಲೈ 2020, 5:56 IST
ಅಕ್ಷರ ಗಾತ್ರ

ಜೈಪುರ: ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮಾಜಿ ಉಪ ಮುಖ್ಯಮಂತ್ರಿ ಸಚಿನ್ ಪೈಲಟ್ ಅವರ ಬೆಂಬಲಿಗರಾದ ವಿಶ್ವೇಂದ್ರ ಸಿಂಗ್, ಭನ್ವರ್‌ಲಾಲ್ ಶರ್ಮಾರನ್ನು ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.

ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಸಂಚು ಹೂಡಿದ್ದ ಆಡಿಯೊ ಸಾಕ್ಷ್ಯ ಬಿಡುಗಡೆ ಕುರಿತು ಮಾತನಾಡಿದ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, ಪ್ರಜಾಪ್ರಭುತ್ವದಲ್ಲಿ ಕರಾಳ ಇತಿಹಾಸವಿದು ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೆಖಾವತ್, ಬಿಜೆಪಿ ನಾಯಕ ಸಂಜಯ್ ಜೈನ್ ಮತ್ತು ಕಾಂಗ್ರೆಸ್ ಶಾಸಕ ಭನ್ವರ್‌ ಲಾಲ್ ಶರ್ಮಾ ಅವರ ನಡುವೆ ನಡೆದ ಸಂಭಾಷಣೆಯ, ಶಾಸಕರಿಗೆ ಆಮಿಷವೊಡ್ಡುವುದಕ್ಕೆ ಸಂಬಂಧಿಸಿದ ಆಡಿಯೊಗಳು ಬಿಜೆಪಿಯ ಸಂಚು ಬಯಲು ಮಾಡಿವೆ ಎಂದೂ ಅವರು ಹೇಳಿದ್ದಾರೆ. ಶಾಸಕರನ್ನು ಹಣ ನೀಡಿ ಖರೀದಿಸಿ ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಿಜೆಪಿ ಮುಂದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಸ್ಥಾನ ಸರ್ಕಾರ ಅಸ್ಥಿರಗೊಳಿಸಲು ಸಂಚು ಹೂಡಿದ ವಿಚಾರವಾಗಿ ವಿಶೇಷ ಕಾರ್ಯಾಚರಣೆ ತಂಡಕ್ಕೆ (ಎಸ್‌ಒಜಿ) ದೂರು ನೀಡಿದ್ದು, ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಮನವಿ ಮಾಡಲಾಗಿದೆ ಎಂದು ಕಾಂಗ್ರೆಸ್‌ನ ಮುಖ್ಯ ವಿಪ್ ಮಹೇಶ್ ಜೋಶಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT