ಸೋಮವಾರ, ಆಗಸ್ಟ್ 2, 2021
28 °C

ರಾಜಸ್ಥಾನ ರಾಜಕೀಯ | ಸಚಿನ್ ಪೈಲಟ್ ವಜಾಕ್ಕೆ ಶಶಿ ತರೂರ್ ಬೇಸರ

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

Sachin pilot

ನವದೆಹಲಿ: ರಾಜಸ್ಥಾನ ಉಪಮುಖ್ಯಮಂತ್ರಿ ಮತ್ತು ಕಾಂಗ್ರೆಸ್‌ನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಸಚಿನ್‌ ಪೈಲಟ್‌ ವಜಾಗೊಂಡಿರುವುದಕ್ಕೆ ಪಕ್ಷದ ಹಿರಿಯ ನಾಯಕ ಶಶಿ ತರೂರ್ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ಸಚಿನ್ ಪೈಲಟ್ ಅತ್ಯುತ್ತಮ ನಾಯಕ ಎಂದು ಬಣ್ಣಿಸಿದ್ದಾರೆ.

‘ಸಚಿನ್ ಪೈಲಟ್ ಅವರು ಕಾಂಗ್ರೆಸ್‌ನಿಂದ ನಿರ್ಗಮಿಸುತ್ತಿರುವುದು ಬೇಸರ ಉಂಟುಮಾಡಿದೆ. ಹೀಗಾಗಬಾರದಿತ್ತು. ಅವರೊಬ್ಬ ಅತ್ಯುತ್ತಮ ಮತ್ತು ಕುಶಾಗ್ರಮತಿ ನಾಯಕ. ಈ ನಿರ್ಧಾರ ಕೈಗೊಳ್ಳುವ ಬದಲು ಅವರು, ಅವರದೇ ಆದ ಮತ್ತು ನಮ್ಮೆಲ್ಲರ ಕನಸಾದ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಮತ್ತು ಪರಿಣಾಮಕಾರಿಯನ್ನಾಗಿಸುವ ಕಾರ್ಯಕ್ಕೆ ಕೈಜೋಡಿಸಬೇಕಾಗಿತ್ತು’ ಎಂದು ತರೂರ್ ಟ್ವೀಟ್ ಮಾಡಿದ್ದಾರೆ.

ರಾಜಸ್ಥಾನ ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕರೆಯಲಾಗಿದ್ದ ಕಾಂಗ್ರೆಸ್‌ನ ಎರಡೂ ಶಾಸಕಾಂಗ ಪಕ್ಷದ ಸಭೆಗೆ ಪೈಲಟ್ ಹಾಜರಾಗಿರಲಿಲ್ಲ. ಹೀಗಾಗಿ ಅವರನ್ನು ಮಂಗಳವಾರ ವಜಾಗೊಳಿಸಲಾಗಿತ್ತು. ಕಾಂಗ್ರೆಸ್‌ ಸಂಸದ ರಾಹುಲ್‌ ಗಾಂಧಿ, ಮುಖಂಡರಾದ ಪ್ರಿಯಾಂಕಾ ಗಾಂಧಿ ವಾದ್ರಾ, ಪಿ. ಚಿದಂಬರಂ, ಕೆ.ಸಿ. ವೇಣುಗೋಪಾಲ್‌ ಸೇರಿ ಹಲವರು ಪೈಲಟ್‌ ಅವರ ಬಂಡಾಯ ಶಮನಕ್ಕೆ ಯತ್ನಿಸಿದ್ದಾರೆ. ಆದರೆ, ಅದು ಫಲ ನೀಡಿಲ್ಲ ಎನ್ನಲಾಗಿದೆ.

ಇದನ್ನೂ ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು