ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾಜವಾದಿ ಪಕ್ಷದ ಮಾಜಿ ಮುಖಂಡ, ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ನಿಧನ

Last Updated 1 ಆಗಸ್ಟ್ 2020, 12:10 IST
ಅಕ್ಷರ ಗಾತ್ರ

ನವದೆಹಲಿ: ಸಮಾಜವಾದಿ ಪಕ್ಷದ ಮಾಜಿ ನಾಯಕ,ರಾಜ್ಯಸಭಾ ಸದಸ್ಯ ಅಮರ್ ಸಿಂಗ್ (64) ಶನಿವಾರ ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಿಂಗಪುರದ ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು.

2013ರಲ್ಲಿ ದುಬೈಗೆ ತೆರಳಿದ್ದಾಗಅಮರ್ ಸಿಂಗ್ ಅವರಿಗೆ ಕಿಡ್ನಿ ವೈಫಲ್ಯ ಉಂಟಾಗಿತ್ತು. ಬಳಿಕ ರಾಜಕೀಯದಿಂದ ದೂರವುಳಿದಿದ್ದ ಅವರು 2016ರಲ್ಲಿ ಮತ್ತೆ ಸಕ್ರಿಯ ರಾಜಕಾರಣಕ್ಕೆ ಮರಳಿದ್ದರು. ಅವರು ಪತ್ನಿ ಪಂಕಜಾ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಈ ವರ್ಷ ಮಾರ್ಚ್‌ನಲ್ಲಿ ‘ಅಮರ್ ಸಿಂಗ್ ನಿಧನ’ ಎಂಬ ವದಂತಿ ಹರಡಿತ್ತು. ಆಗ, ‘ಟೈಗರ್ ಜಿಂದಾ ಹೇ’ ಎಂಬ ಸಂದೇಶದೊಂದಿಗೆ ಅವರೇ ಸ್ಪಷ್ಟನೆ ನೀಡಿದ್ದರು.

ತಿಲಕರಿಗೆ ಗೌರವ ಸಲ್ಲಿಸಿ ಟ್ವೀಟ್ ಮಾಡಿದ್ದ ಸಿಂಗ್:ಸ್ವಾತಂತ್ರ್ಯ ಹೋರಾಟಗಾರಬಾಲಗಂಗಾಧರ ತಿಲಕ್ ಅವರ ಪುಣ್ಯ ತಿಥಿ ಸಂದರ್ಭದಲ್ಲಿ ಇಂದು ಬೆಳಿಗ್ಗೆ ಅಮರ್ ಸಿಂಗ್ ಟ್ವೀಟ್ ಮಾಡಿದ್ದರು. ಬಕ್ರೀದ್ ಶುಭಾಶಯ ಕೋರಿ ಟ್ವೀಟ್‌ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT