ಮಂಗಳವಾರ, ಜುಲೈ 27, 2021
21 °C

ರಾಮಮಂದಿರ: ಆಗಸ್ಟ್‌ ಮೊದಲ ವಾರ ಶಂಕುಸ್ಥಾಪನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಖನೌ: ಅಯೋಧ್ಯೆಯಲ್ಲಿ ಮುಂದಿನ ಆಗಸ್ಟ್‌ 3 ಅಥವಾ 5ರಂದು ಉದ್ದೇಶಿತ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ನಿರ್ಧರಿಸಲಾಗಿದೆ.

ರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ ಶನಿವಾರ ನಡೆಸಿದ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಕಾರ್ಯಕ್ರಮದ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಲಾಗಿದೆ.

‘ಶಂಕುಸ್ಥಾಪನೆ ನೆರವೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಹ್ವಾನಿಸಿದ್ದೇವೆ. ಈ ನಿಟ್ಟಿನಲ್ಲಿ ಅಂತಿಮ ತೀರ್ಮಾನವನ್ನು ಪ್ರಧಾನಿ ತೆಗೆದುಕೊಳ್ಳುತ್ತಾರೆ’ ಎಂದು  ಟ್ರಸ್ಟ್ ಕಾರ್ಯದರ್ಶಿ ಚಂಪತ್ ರಾಯ್ ಹೇಳಿದರು.

‘ರಾಮ ದೇವಾಲಯದ ವಿನ್ಯಾಸವನ್ನು ಬದಲಾಯಿಸಲಾಗಿದೆ. ಈ ಮೊದಲು ನಿರ್ಧರಿಸಿದಂತೆ ಮೂರು ಗುಮ್ಮಟಗಳ ಬದಲಾಗಿ ಐದು ಗುಮ್ಮಟಗಳನ್ನು ಹೊಂದಿರಲಿದೆ. ಈ ದೇವಾಲಯ ಮೂರುವರೆ ವರ್ಷದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ದೇಶದಲ್ಲಿನ ಪರಿಸ್ಥಿತಿ ನೋಡಿಕೊಂಡು ದೇವಸ್ಥಾನದ ನಿರ್ಮಾಣ ಕಾಮಗಾರಿ ಆರಂಭಿಸಲಾಗುವುದು’ ಎಂದು ತಿಳಿಸಿದರು. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು