ಭಾನುವಾರ, ಆಗಸ್ಟ್ 1, 2021
27 °C
ಮಹಾರಾಷ್ಟ್ರ ಸಚಿವ ಏಕನಾಥ್ ಶಿಂಧೆ

‘ರಾಮಮಂದಿರ ನಿರ್ಮಾಣ' ರಾಜಕೀಯ ವಿಷಯವಲ್ಲ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನಾಗಪುರ: ‘ರಾಮಮಂದಿರ ನಿರ್ಮಾಣ‘ ಕೇವಲ ರಾಜಕೀಯ ವಿಷಯವಲ್ಲ, ದೇಶದ ಲಕ್ಷಾಂತರ ಭಕ್ತರ ಹೆಮ್ಮೆ ಮತ್ತು ನಂಬಿಕೆಗೆ ಸಂಬಂಧಿಸಿದ್ದು‘ ಎಂದು ಮಹಾರಾಷ್ಟ್ರ ಸರ್ಕಾರದ ನಗರಾಭಿವೃದ್ಧಿ ಮತ್ತು ಲೋಕೋಪಯೋಗಿ ಇಲಾಖೆ ಸಚಿವ ಏಕನಾಥ ಶಿಂಧೆ ಹೇಳಿದ್ದಾರೆ.

‘ರಾಮನ ದೇವಾಲಯವನ್ನು ವಿರೋಧಿಸುವವರು, ಇದೇ ವಿಷಯವನ್ನು ತಮ್ಮ ರಾಜಕೀಯ ಬೆಳವಣಿಗಾಗಿ ಬಳಸಿಕೊಳ್ಳುತ್ತಿದ್ದಾರೆ‘ ಎಂಬ ವಿಶ್ವ ಹಿಂದೂ ಪರಿಷತ್‌ನವರು ಇತ್ತೀಚೆಗೆ ನೀಡಿದ ಹೇಳಿಕೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ.

‘ಶಿವಸೇನಾ ಮುಖ್ಯಸ್ಥ ಉದ್ಧವ್‌ ಠಾಕ್ರೆ ಅಯೋಧ್ಯೆಗೆ ಭೇಟಿ ನೀಡಿದ್ದರು. ಆಗ ಅವರು ಮುಖ್ಯಮಂತ್ರಿಯಾಗಿರಲಿಲ್ಲ. ಈಗ ಮುಖ್ಯಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ರಾಮಮಂದಿರ ನಿರ್ಮಾಣ ಎನ್ನುವುದು ಹೆಮ್ಮೆ ಮತ್ತು ನಂಬಿಕೆಯ ವಿಷಯವೇ ಹೊರತು, ರಾಜಕೀಯ ವಿಷಯವಲ್ಲ‘ ಎಂದು ಸ್ಪಷ್ಟಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು