ಮಂಗಳವಾರ, ಆಗಸ್ಟ್ 4, 2020
24 °C

ಪುಣೆಯಲ್ಲಿ ಹೆಚ್ಚುತ್ತಿರುವ ಸೋಂಕು: ಮತ್ತೆ ಲಾಕ್‌ಡೌನ್‌ಗೆ ಜನಪ್ರತಿನಿಧಿಗಳ ಒತ್ತಾಯ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಪುಣೆ: ಇಲ್ಲಿನ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ವೈರಸ್‌ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಮತ್ತೆ ಲಾಕ್‌ಡೌನ್‌ ಮಾಡುವಂತೆ ಒತ್ತಾಯಿಸಿದ್ದಾರೆ.

ಆದರೆ, ಕೆಲವರು ಲಾಕ್‌ಡೌನ್‌ ಬೇಡ, ಸಮರ್ಪಕ ಆರೋಗ್ಯ ಸೇಮೆ ಮತ್ತು ಮೂಲಸೌಕರ್ಯವನ್ನು ಹೆಚ್ಚಿಸುವತ್ತ ಗಮನಹರಿಸಬೇಕು ಎಂದು ಹೇಳುತ್ತಿದ್ದಾರೆ.

ಚುನಾಯಿತ ಪ್ರತಿನಿಧಿಗಳು ದೀಘಿ, ಹಿಂಜೇವಾಡಿ, ದೇಹುಗಾಂವ್ ಮತ್ತು ಚಕನ್ ಪ್ರದೇಶಗಳಲ್ಲಿ 10 ದಿನಗಳವರೆಗೂ ಲಾಕ್‌ಡೌನ್‌ ಮಾಡಿದರೆ ವ್ಯಾಪಕವಾಗಿ ಸೋಂಕು ಹರಡುವುದನ್ನು ತಡೆಯಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. 

ಸೋಂಕು ಗ್ರಾಮೀಣ ಭಾಗಗಳಲ್ಲೂ ಹರಡುತ್ತಿದ್ದು, ಇದನ್ನು ನಿಯಂತ್ರಿಸಲು ಲಾಕ್‌ಡೌನ್‌ ಅನಿವಾರ್ಯವಾಗಿದೆ.  ಕೈಗಾರಿಕಾ ಪ್ರದೇಶಗಳಲ್ಲಿನ ಚಟುವಟಿಕೆಗಳಿಗೆ ಅನುಮತಿ ನೀಡಿ, ಲಾಕ್‌ಡೌನ್‌ ಮಾಡಬೇಕು ಎಂದು ಖೇಡ್ ಕ್ಷೇತ್ರದ ಶಾಸಕ ದಿಲೀಪ್ ಮೋಹಿತೆ ಪಾಟೀಲ್ ಹೇಳಿದ್ದಾರೆ.

ಆದರೆ, ಚಿಂಚ್ವಾಡ್ ಕ್ಷೇತ್ರದ ಬಿಜೆಪಿ ಶಾಸಕ ಲಕ್ಷ್ಮಣ್ ಜಗತಾಪ್ ಹಾಗೂ ಎನ್ ಸಿಪಿ ಸಂಸದ ಡಾ.ಅಮೋಲ್ ಕೋಲ್ಹೆ ಅವರು ಈಗ ಮತ್ತೆ ಲಾಕ್‌ಡೌನ್‌ ಮಾಡುವುದರಿಂದ ಯಾವುದೇ ಪ್ರಯೋಜನವಿಲ್ಲ, ಜನರಿಗೆ ಆರೋಗ್ಯ ಸೇವೆಗಳನ್ನು ಹೆಚ್ಚಿಸಬೇಕು ಹಾಗೂ ಹೆಚ್ಚು ಹೆಚ್ಚು ಕೋವಿಡ್‌ ಪರೀಕ್ಷೆಗಳನ್ನು ನಡೆಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಂತರ ಕಾಯ್ದುಕೊಳ್ಳುವುದು ಮತ್ತು ಮಾಸ್ಕ್ ಬಳಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಕೋಲ್ಹೆ ಹೇಳಿದ್ದಾರೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು