ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್‌ಎಸ್ ಸಭೆ: ಮಂದಿರ ನಿರ್ಮಾಣ, ಭಾರತ–ಚೀನಾ ನಿಲುವು ಚರ್ಚೆ

ಮಧ್ಯಪ್ರದೇಶದಲ್ಲಿ ನಡೆದ ಆರ್‌ಎಸ್‌ಎಸ್ ಪದಾಧಿಕಾರಗಳ ಸಭೆ
Last Updated 25 ಜುಲೈ 2020, 11:06 IST
ಅಕ್ಷರ ಗಾತ್ರ

ಭೋಪಾಲ್: ಮಧ್ಯಪ್ರದೇಶದಲ್ಲಿ ನಡೆದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಸಭೆಯಲ್ಲಿ ರಾಮ ಮಂದಿರ ನಿರ್ಮಾಣ, ಭಾರತ–ಚೀನಾದ ನಿಲುವುಗಳು ಸೇರಿದಂತೆ ಕೋವಿಡ್–19 ನಡುವೆ ದೇಶ ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು ಎಂದು ಸಂಘದ ಮೂಲಗಳು ತಿಳಿಸಿವೆ.

ಮಧ್ಯಪ್ರದೇಶದ ಹೊರವಲಯದ ಶಾರದಾವಿಹಾರ ಪ್ರದೇಶದ ಸರಸ್ವತಿ ವಿದ್ಯಾಮಂದಿರ ವಸತಿ ಶಾಲೆಯಲ್ಲಿ ನಾಲ್ಕು ದಿನಗಳ ಕಾಲ ನಡೆದ ಆರ್‌ಎಸ್‌ಎಸ್ ಪದಾಧಿಕಾರಿಗಳ ಸಭೆ ಶುಕ್ರವಾರ ಮುಕ್ತಾಯವಾಯಿತು.

‘ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಇತರ ಪದಾಧಿಕಾರಿಗಳು ಕೋವಿಡ್–19 ಮಾರ್ಗಸೂಚಿಗಳನ್ನು ಅನುಸರಿಸಿ ರಾಮಮಂದಿರ ನಿರ್ಮಾಣ ಭೂಮಿಪೂಜೆ ಕಾರ್ಯಕ್ರಮವನ್ನು ದೊಡ್ಡ ಮಟ್ಟದಲ್ಲಿ ನಡೆಸುವ ಕುರಿತು ಚರ್ಚಿಸಿದರು’ ಎಂದು ಆರ್‌ಎಸ್‌ಎಸ್ ತಿಳಿಸಿದೆ.

ಚೀನಾದ ವಸ್ತುಗಳನ್ನು ಬಹಿಷ್ಕರಿಸಲು ರಾಷ್ಟ್ರಮಟ್ಟದಲ್ಲಿ ಸ್ವದೇಶಿ ಚಳವಳಿಯನ್ನು ಬಲಪಡಿಸುವ ಕುರಿತೂ ಸಭೆಯಲ್ಲಿ ಚರ್ಚೆಗಳು ನಡೆದವು. ನಾಲ್ಕು ದಿನಗಳ ಸಭೆಯಲ್ಲಿ ಆರ್‌ಎಸ್‌ಎಸ್ ಮುಖ್ಯಸ್ಥರು ನಾಗ್ಪುರ, ದೆಹಲಿ ಮತ್ತು ಇತರ ಸ್ಥಳಗಳಲ್ಲಿರುವ ಕಾರ್ಯಕರ್ತರ ಜೊತೆಗೆ ಮಾತುಕತೆ ನಡೆಸಿದರು ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT