ಮಂಗಳವಾರ, ಆಗಸ್ಟ್ 3, 2021
22 °C

ಅಶೋಕ್ ಗೆಹ್ಲೋಟ್ ಸರ್ಕಾರಕ್ಕೆ 109ಕ್ಕೂ ಹೆಚ್ಚು ಶಾಸಕರ ಬೆಂಬಲವಿದೆ: ಕಾಂಗ್ರೆಸ್

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Avinash pandey

ಜೈಪುರ: ರಾಜಸ್ಥಾನದ ರಾಜಕೀಯ ಬಿಕ್ಕಟ್ಟು ಉಲ್ಬಣಿಸಿರುವ ನಡುವೆಯೇ ಅಶೋಕ್ ಗೆಹ್ಲೋಟ್ ನೇತೃತ್ವದ ಸರ್ಕಾರಕ್ಕೆ 109 ಶಾಸಕರ ಬೆಂಬಲವಿದೆ ಎಂದು ಕಾಂಗ್ರೆಸ್ ಹೇಳಿದೆ.

ಅಶೋಕ್ ಗೆಹ್ಲೋಟ್, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ನಾಯಕತ್ವ ಬೆಂಬಲಿಸಿ 109 ಶಾಸಕರು ಪತ್ರಕ್ಕೆ ಸಹಿ ಮಾಡಿದ್ದಾರೆ. ಇನ್ನೂ ಕೆಲವು ಶಾಸಕರು ದೂರವಾಣಿ ಮೂಲಕ ಮುಖ್ಯಮಂತ್ರಿ ಜತೆ ಮಾತುಕತೆ ನಡೆಸಿದ್ದು, ಪತ್ರಕ್ಕೆ ಸಹಿ ಮಾಡುವುದಾಗಿ ತಿಳಿಸಿದ್ದಾರೆ ಎಂದು ರಾಜಸ್ಥಾನದ ಕಾಂಗ್ರೆಸ್ ಉಸ್ತುವಾರಿ ಅವಿನಾಶ್ ಪಾಂಡೆ ತಿಳಿಸಿದ್ದಾರೆ.

ಇಂದು (ಸೋಮವಾರ) ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಗೆ ಪಕ್ಷದ ಶಾಸಕರಿಗೆ ವಿಪ್ ಜಾರಿ ಮಾಡಲಾಗಿದೆ. ವೈಯಕ್ತಿಕ ಹಾಗೂ ವಿಶೇಷ ಕಾರಣವಿಲ್ಲದೆ ಈ ಸಭೆಗೆ ಗೈರಾಗುವ ಶಾಸಕರ ವಿರುದ್ಧ ಕಠಿಣ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 

ಅವಿನಾಶ್ ಪಾಂಡೆ ಅವರು ದೆಹಲಿಯಿಂದ ಭಾನುವಾರ ರಾತ್ರಿ ಜೈಪುರ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ಈ ಸಂದರ್ಭ, ‘ದೆಹಲಿಯಲ್ಲಿ ನೀವು ಸಚಿನ್ ಪೈಲಟ್ ಅವರನ್ನು ಭೇಟಿಯಾಗಿದ್ದೀರಾ? ಅವರು ದೆಹಲಿಯಲ್ಲಿದ್ದಾರಾ’ ಎಂದು ಪತ್ರಕರ್ತರು ಕೇಳಿ ಪ್ರಶ್ನೆಗೆ ಅವರು, ‘ನನಗೆ ತಿಳಿದಿಲ್ಲ’ ಎಂದು ಉತ್ತರಿಸಿದ್ದಾರೆ.

ಅಶೋಕ್‌ ಗೆಹ್ಲೋಟ್‌ ಮತ್ತು ಉಪಮುಖ್ಯಮಂತ್ರಿ ಸಚಿನ್‌ ಪೈಲಟ್‌ ನಡುವಣ ಭಿನ್ನಮತ ತಾರಕಕ್ಕೇರಿದೆ. ಇದರ ಬೆನ್ನಲ್ಲೇ, ತಮ್ಮ ಬೆಂಬಲಿಗರಾದ 16 ಶಾಸಕರೊಂದಿಗೆ ಪೈಲಟ್‌ ಅವರು ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಅವರು ಬಿಜೆಪಿ ಸೇರಲಿದ್ದಾರೆ ಎಂಬೆಲ್ಲ ವರದಿಗಳು ಭಾನುವಾರ ಹರಿದಾಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು