ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಜನ್ಮಭೂಮಿ: ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

Last Updated 20 ಜುಲೈ 2020, 11:40 IST
ಅಕ್ಷರ ಗಾತ್ರ

ನವದೆಹಲಿ: ಅಯೋಧ್ಯೆಯ ರಾಮಜನ್ಮಭೂಮಿ ಪ್ರದೇಶದಲ್ಲಿ ದೊರೆತ ವಸ್ತುಗಳನ್ನು ಸಂರಕ್ಷಿಸುವಂತೆ ಕೋರಿ ಸಲ್ಲಿಸಲಾಗಿದ್ದ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

ಅರ್ಜಿದಾರರಿಗೆ ತಲಾ ₹ 1 ಲಕ್ಷ ದಂಡ ವಿಧಿಸಲಾಗಿದ್ದು, ಒಂದು ತಿಂಗಳೊಳಗೆ ಪಾವತಿಸುವಂತೆ ನ್ಯಾಯಮೂರ್ತಿಗಳಾದ ಅರುಣ್‌ ಮಿಶ್ರಾ, ಬಿ.ಆರ್‌.ಗವಾಯಿ ಮತ್ತು ಕೃಷ್ಣನ್‌ ಮುರಾರಿ ಅವರ ಪೀಠ ಸೂಚಿಸಿದೆ.

ಐವರು ನ್ಯಾಯಮೂರ್ತಿಗಳ ಪೀಠ ಈಗಾಗಲೇ ರಾಮಜನ್ಮಭೂಮಿ ಸಂಬಂಧ ತೀರ್ಪನ್ನು ನೀಡಿದೆ. ಅರ್ಜಿಗಳು ಈ ತೀರ್ಪನ್ನುಪ್ರಶ್ನಿಸುವಂತಿವೆ.ಇವು ಗಂಭೀರವಲ್ಲದ ‘ಕ್ಷುಲ್ಲಕ’ ಅರ್ಜಿಗಳು ಎಂದೂ ಹೇಳಿದೆ.

ರಾಮಜನ್ಮಭೂಮಿ ಟ್ರಸ್ಟ್‌ ಕಲಾಕೃತಿ ಮತ್ತು ದೊರೆತ ವಸ್ತುಗಳನ್ನು ರಕ್ಷಿಸುವುದಾಗಿ ಹೇಳಿದೆ. ಆದರೂ, ಅರ್ಜಿದಾರರು ಸಂವಿಧಾನದ 32ನೇ ವಿಧಿಯನ್ವಯ ಕೋರ್ಟ್‌ ಮುಂದೆ ಬಂದಿರುವುದು ಏಕೆ ಎಂದು ಪೀಠ ಪ್ರಶ್ನಿಸಿತು. ಅರ್ಜಿದಾರರಾದ ಸತೀಶ್‌ ಚಿಂದೂಜಿ ಶಂಭರ್ಕರ್‌ ಮತ್ತು ಡಾ.ಅಂಬೇಡ್ಕರ್‌ ಫೌಂಡೇಶನ್‌ಗೆ ದಂಡ ವಿಧಿಸಬೇಕು ಎಂದು ಸರ್ಕಾರದ ಪರ ವಾದಿಸಿದ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ನ್ಯಾಯಾಲಯಕ್ಕೆ ಮನವಿ ಮಾಡಿದರು. ಇದನ್ನು ಪೀಠ ಪುರಸ್ಕರಿಸಿತು.

ಅಯೋಧ್ಯೆಯಲ್ಲಿ ದೊರೆತ ವಸ್ತುಗಳನ್ನು ಸಂರಕ್ಷಿಸುವಂತೆಭಾರತೀಯ ಪುರಾತತ್ವ ಇಲಾಖೆಗೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ನ್ಯಾಯಾಲಯವನ್ನು ಕೋರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT