ಶುಕ್ರವಾರ, ಆಗಸ್ಟ್ 6, 2021
22 °C
ಹೈಕೋರ್ಟ್‌ ತೀರ್ಪಿನ ವಿರುದ್ಧ ಮೇಲ್ಮನವಿ

ಪ್ರಾಣಿ ಬಲಿ ನಿಷೇಧ ಕಾನೂನು: ಕೇರಳ ಸರ್ಕಾರದ ಪ್ರತಿಕ್ರಿಯೆ ಕೇಳಿದ ‘ಸುಪ್ರೀಂ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇವರ ಹೆಸರಿನಲ್ಲಿ ಪ್ರಾಣಿ ಅಥವಾ ಪಕ್ಷಿ ಬಲಿ ನೀಡುವುದನ್ನು ನಿಷೇಧಿಸಲು ಜಾರಿಗೊಳಿಸಿದ್ದ ಕಾಯ್ದೆ ಕುರಿತು ಪ್ರತಿಕ್ರಿಯೆ ದಾಖಲಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಕೇರಳ ಸರ್ಕಾರಕ್ಕೆ ಸೂಚಿಸಿದೆ.

ಹಿಂದೆ ಕಾಯ್ದೆಯ ಸಿಂಧುತ್ವವನ್ನು ಹೈಕೋರ್ಟ್‌ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರ ಪಿ.ಇ.ಗೋಪಾಲಕೃಷ್ಣನ್‍ ಅವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ ನೇತೃತ್ವದ ಪೀಠ ಈ ಸಂಬಂಧ ಕೇರಳ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿತು.

'ಪ್ರಾಣಿ ಬಲಿಯು ಧಾರ್ಮಿಕ ಆಚರಣೆಯ ಆಂತರಿಕ ಭಾಗವಾಗಿದೆ' ಎಂದು ಅರ್ಜಿದಾರರು ವಾದಿಸಿದ್ದರು. ಹೈಕೋರ್ಟ್‌ ಆದೇಶವು ವ್ಯಕ್ತಿಯ ಮೂಲಭೂತ ಹಕ್ಕಿನ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಪ್ರತಿಪಾದಿಸಲಾಗಿದೆ.

ಧಾರ್ಮಿಕ ಆಚರಣೆಯಲ್ಲಿ ಪ್ರಾಣಿ ಅಥವಾ ಪಕ್ಷಿ ಬಲಿ ನೀಡುವುದು ಅಗತ್ಯ ಎಂಬುದನ್ನು ಸಾಬೀತುಪಡಿಸಲು ಯಾವುದೇ ಆಧಾರಗಳನ್ನು ಒದಗಿಸಿಲ್ಲ ಎಂದು ಹೇಳಿದ್ದ ಕೇರಳ ಹೈಕೋರ್ಟ್, ಕಾಯ್ದೆಯ ಸಿಂಧುತ್ವ ಪ್ರಶ್ನಿಸಿದ್ದ ಅರ್ಜಿಯನ್ನು ಜೂನ್‌ 16 ರಂದು ವಜಾಗೊಳಿಸಿತ್ತು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು