ಮಂಗಳವಾರ, ಆಗಸ್ಟ್ 4, 2020
22 °C
ತಾಯಂದಿರಿಗಾಗಿ ಪರಿಹಾರ ಕೋರಿ ‘ಸುಪ್ರೀಂ’ ಮೆಟ್ಟಿಲೇರಿದ ಎನ್‌ಜಿಒ

ಹಾಲುಣಿಸುವ ತಾಯಂದಿರಿಗೆ ಕೈಗೊಂಡ ಕ್ರಮ ಕುರಿತು ಕೇಂದ್ರಕ್ಕೆ ವರದಿ ಕೇಳಿದ ಸುಪ್ರೀಂ

ಪಿಟಿಐ Updated:

ಅಕ್ಷರ ಗಾತ್ರ : | |

ತಾಯಿಯ ಎದೆ ಹಾಲು ಕುಡಿಯುತ್ತಿರುವ ಮಗು– ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದಲ್ಲಿ ಕೋವಿಡ್‌–19 ವ್ಯಾಪಕವಾಗಿ ಹರಡುತ್ತಿರುವ ಸಂದರ್ಭದಲ್ಲಿ ಹಾಲುಣಿಸುತ್ತಿರುವ ಬಡ ತಾಯಂದಿರಿಗೆ ಯಾವ ರೀತಿಯ ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗಿದೆ ಎನ್ನುವ ಕುರಿತು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರದಿಂದ ವರದಿ ಕೇಳಿದೆ.

ಬಡ ತಾಯಂದಿರಿಗೆ ಧನಸಹಾಯದ ಪರಿಹಾರ ನೀಡಬೇಕೆಂದು ಕೋರಿ, ಸರ್ಕಾರೇತರ ಸಂಸ್ಥೆಯೊಂದು (ಎನ್‌ಜಿಒ) ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ.

ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೊಬಡೆ ಮತ್ತು ನ್ಯಾಯಮೂರ್ತಿಗಳಾದ ಆರ್.ಸುಭಾಷ್ ರೆಡ್ಡಿ ಮತ್ತು ಎ.ಎಸ್. ಬೋಪಣ್ಣ ಅವರನ್ನೊಳಗೊಂಡ ನ್ಯಾಯಪೀಠವು, ಹಾಲುಣಿಸುವ ಬಡ ತಾಯಂದಿರಿಗೆ ಸಹಾಯಕ್ಕೆ ಕೈಗೊಂಡಿರುವ ಕ್ರಮಗಳ ವಿವರ ಕುರಿತು ವರದಿ ಸಲ್ಲಿಸುವಂತೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಮಂಗಳವಾರ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು