ಬುಧವಾರ, ಆಗಸ್ಟ್ 4, 2021
23 °C
ಅಗತ್ಯ ಕಂಡು ಬಂದ ಮಾರ್ಗಗಳಲ್ಲಿ ಅನುಮತಿ: ಡಿಜಿಸಿಎ

ಜುಲೈ 31ರ ವರೆಗೆ ಅಂತರರಾಷ್ಟ್ರೀಯ ನಾಗರಿಕ ವಿಮಾನ ಹಾರಾಟ ಇಲ್ಲ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಂತರರಾಷ್ಟ್ರೀಯ ನಾಗರಿಕ ವಿಮಾನಗಳ ಹಾರಾಟದ ಮೇಲೆ ವಿಧಿಸಿದ್ದ ನಿರ್ಬಂಧವನ್ನು ಜುಲೈ 31ರ ವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಪ್ರಧಾನ ನಿರ್ದೇಶಕರ (ಡಿಜಿಸಿಎ) ಕಚೇರಿ ಮೂಲಗಳು ಶುಕ್ರವಾರ ತಿಳಿಸಿವೆ.

ಅಗತ್ಯ ಕಂಡು ಬಂದ ಮಾರ್ಗಗಳಲ್ಲಿ ವಿಮಾನಗಳ ಹಾರಾಟಕ್ಕೆ ಅನುಮತಿ ನೀಡಲಾಗುತ್ತದೆ ಎಂದೂ ಇವೇ ಮೂಲಗಳು ತಿಳಿಸಿವೆ.

ಕೋವಿಡ್‌ ಪ್ರಸರಣ ತಡೆಗಟ್ಟುವ ಸಲುವಾಗಿ ಅಂತರರಾಷ್ಟ್ರೀಯ ನಾಗರಿಕ ವಿಮಾನಗಳ ಹಾರಾಟವನ್ನು ಮಾರ್ಚ್‌ 23ರಂದು ರದ್ದುಪಡಿಸಲಾಗಿತ್ತು.

‘ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ಆರಂಭಿಸುವ ಸಂಬಂಧ ಅಮೆರಿಕ, ಕೆನಡಾ, ಯುರೋಪ್‌ ಮತ್ತು ಕೊಲ್ಲಿ ರಾಷ್ಟ್ರಗಳೊಂದಿಗೆ ಸಮಾಲೋಚನೆ ನಡೆದಿದೆ. ಮಾತುಕತೆ ಫಲಪ್ರದವಾದರೆ, ಪರಸ್ಪರ ದೇಶಗಳಿಗೆ ವಿಮಾನಗಳ ಕಾರ್ಯಾಚರಣೆ ಸಾಧ್ಯವಾಗಲಿದೆ’ ಎಂದು ಭಾರತೀಯ ವಿಮಾನನಿಲ್ದಾಣಗಳ ಪ್ರಾಧಿಕಾರದ ಅಧ್ಯಕ್ಷ ಅರವಿಂದ ಸಿಂಗ್‌ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು