ಭಾನುವಾರ, ಆಗಸ್ಟ್ 1, 2021
27 °C

ಉತ್ತರ ಪ್ರದೇಶ | ಜುಲೈ 13ರವರೆಗೆ ಲಾಕ್‌ಡೌನ್: ಭದ್ರತೆ ಬಿಗಿಗೊಳಿಸಿದ ಸರ್ಕಾರ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಲಖನೌ: ಉತ್ತರ ಪ್ರದೇಶದಲ್ಲಿ ಶುಕ್ರವಾರ ರಾತ್ರಿಯಿಂದ ಲಾಕ್‌ಡೌನ್‌ ಜಾರಿಯಾಗುತ್ತಿದ್ದಂತೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.

ಕೋವಿಡ್‌–19 ಪ್ರಕರಣಗಳ ಏರಿಕೆಯಾಗುತ್ತಿರುವುದರಿಂದಾಗಿ ಇಲ್ಲಿನ ಸರ್ಕಾರ ಲಾಕ್‌ಡೌನ್‌ ಜಾರಿಗೆ ಗುರುವಾರ ಸಂಜೆ ಆದೇಶಿಸಿತ್ತು. ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5ರವರೆಗೆ ಲಾಕ್‌ಡೌನ್‌ ಜಾರಿಯಲ್ಲಿರಲಿದೆ.

ಲಾಕ್‌ಡೌನ್‌ ಅನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಸಲುವಾಗಿ ಎಲ್ಲೆಡೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದೆ.

‘ರಾಜ್ಯ ಮುಖ್ಯಕಾರ್ಯದರ್ಶಿ ಘೋಷಿಸಿರುವ ಆದೇಶವನ್ನು ಮೀರತ್‌ನಲ್ಲಿ ಪಾಲಿನೆಯಾಗುವಂತೆ ಅಧಿಕಾರಿಗಳು ನೋಡಿಕೊಳ್ಳುತ್ತಿದ್ದಾರೆ. ಇಂದು ಮುಖ್ಯಮಂತ್ರಿ ಅವರೂ ನಿರ್ದೇಶನಗಳನ್ನು ನೀಡಿದ್ದಾರೆ. ಅಗತ್ಯ ಸೇವೆಗಳಿಗೆ ನೀಡಿರುವ ವಿನಾಯಿತಿ ಹೊರತುಪಡಿಸಿ ಉಳಿದವುಗಳನ್ನು ನಿಷೇಧಿಸಲಾಗಿದೆ’ ಎಂದು ಮೀರತ್‌ ಐಜಿ ಪ್ರವೀಣ್‌ ಕುಮಾರ್‌ ತಿಳಿಸಿದ್ದಾರೆ.

‘ಕೆಲವು ನಿರ್ಬಂಧಗಳನ್ನು ಹೇರಲಾಗಿದೆ. ಈ ಆದೇಶವನ್ನು ಕಾರ್ಯಗತಗೊಳಿಸುತ್ತೇವೆ. ಮೂರು ದಿನಗಳವರೆಗೆ ಇದನ್ನು ಪಾಲಿಸುತ್ತೇವೆ’ ಎಂದು ಲಖನೌ ಪೊಲೀಸ್‌ ಆಯುಕ್ತ ಸುಜೀತ್‌ ಪಾಂಡೆ ಹೇಳಿದ್ದಾರೆ.

‘ಎಲ್ಲಾ ಕಚೇರಿಗಳು, ಮಾರುಕಟ್ಟೆಗಳು ಮತ್ತು ವಾಣಿಜ್ಯ ಮಳಿಗೆಗಳನ್ನು ಮುಚ್ಚಲಾಗುತ್ತದೆ. ಆದಾಗ್ಯೂ, ಅಗತ್ಯ ಸೇವೆಗಳಿಗೆ ಅವಕಾಶ ನೀಡಲಾಗುವುದು. ರೈಲು ಸಂಚಾರ ಮುಂದುವರಿಯಲಿವೆ’ ಎಂದು ಸರ್ಕಾರ ಲಾಕ್‌ಡೌನ್ ಆದೇಶದಲ್ಲಿ ತಿಳಿಸಿದೆ.

ಶುಕ್ರವಾರದವರೆಗೆ ರಾಜ್ಯದಲ್ಲಿ ಒಟ್ಟು 32 ಸಾವಿರಕ್ಕೂ ಹೆಚ್ಚು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇನ್ನೂ 11,024 ಪ್ರಕರಣಗಳು ಸಕ್ರಿಯವಾಗಿದ್ದು, ಸಾವಿನ ಸಂಖ್ಯೆ 889ಕ್ಕೆ ಏರಿಕೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು