ಶುಕ್ರವಾರ, ಜೂನ್ 25, 2021
20 °C

ಮಹಾರಾಷ್ಟ್ರ: ದೇವೇಂದ್ರ ಫಡಣವೀಸ್‌ ಅವರನ್ನು ಹೊಗಳಿದ ಶಿವಸೇನೆ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ‘ವಿರೋಧ ಪಕ್ಷದ ನಾಯಕರಾಗಿ ದೇವೇಂದ್ರ ಫಡಣವೀಸ್‌ ಅವರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ‘ ಎಂದು ಶಿವಸೇನಾ ಮೆಚ್ಚುಗೆ ವ್ಯಕ್ತಪಡಿಸಿದೆ.

‘ಕೋವಿಡ್‌–19 ನಿಯಂತ್ರಿಸಲು ಕೈಗೊಂಡ ಕ್ರಮಗಳ ಬಗ್ಗೆಯೂ ಫಡಣವೀಸ್‌ ತೃಪ್ತಿ ವ್ಯಕ್ತಪಡಿಸಿದ್ದಾರೆ. ಇದು ಸರ್ಕಾರ ಮತ್ತು ಕೊರೊನಾ ವೈರಸ್ ರೋಗಿಗಳ ಆತ್ಮಸ್ಥೈರ್ಯವನ್ನು ಹೆಚ್ಚಿಸಿದೆ’ ಎಂದು ಹೇಳಿದೆ.

‘ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ ರೀತಿಯಲ್ಲೇ ಫಡಣವೀಸ್‌ ಅವರು ಈಗ ವಿರೋಧ ಪಕ್ಷದ ನಾಯಕರಾಗಿ ಕ್ರಿಯಾಶೀಲರಾಗಿದ್ದಾರೆ. ಒಂದು ವೇಳೆ ಕೊರೊನಾ ಸೋಂಕು ದೃಢಪಟ್ಟರೆ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಬೇಕು ಎಂದು ತಮ್ಮ ಆಪ್ತ ಬಳಗಕ್ಕೆ ಫಡಣವೀಸ್‌ ತಿಳಿಸಿದ್ದಾರೆ. ಫಡಣವೀಸ್‌ ಅವರ ಈ ನಿಲುವು ಪ್ರಶಂಸನೀಯ’ ಎಂದು ಶಿವಸೇನಾದ ಮುಖವಾಣಿ ‘ಸಾಮ್ನಾ’ ಸಂಪಾದಕೀಯದಲ್ಲಿ ಬರೆಯಲಾಗಿದೆ.

’ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ಕುರಿತ ಹೇಳಿಕೆಯನ್ನು ನಾಟಕೀಯ ಎಂದು ಹೇಳಲಾಗದು. ಸರ್ಕಾರದ ಆರೋಗ್ಯ ವ್ಯವಸ್ಥೆ ಸುರಕ್ಷಿತವಾಗಿದೆ ಎನ್ನುವ ವಿಶ್ವಾಸ ಫಡಣವೀಸ್‌ ಅವರಿಗಿದೆ. ಹೀಗಾಗಿ, ಅವರು ಈ ಹೇಳಿಕೆ ನೀಡಿದ್ದಾರೆ’ ಎಂದು ಶಿವಸೇನಾ ಹೇಳಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು