ಮಂಗಳವಾರ, ಆಗಸ್ಟ್ 3, 2021
23 °C

ಭಾರತಕ್ಕೆ ಮತ್ತೊಬ್ಬರು ಮನಮೋಹನ್ ಸಿಂಗ್ ಅವಶ್ಯಕತೆಯಿದೆ: ಶರದ್ ಪವಾರ್

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Sharad Pawar

ಮುಂಬೈ: ಆರ್ಥಿಕ ಬಿಕ್ಕಟ್ಟಿನಿಂದ ದೇಶವನ್ನು ಹೊರತರಲು ಮತ್ತೊಬ್ಬರು ಮನಮೋಹನ್ ಸಿಂಗ್‌ ಅವಶ್ಯಕತೆಯಿದೆ ಎಂದು ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.

‘ಕೇಂದ್ರದಲ್ಲಿ ಪಿ.ವಿ. ನರಸಿಂಹ ರಾವ್ ನೇತೃತ್ವದ ಸರ್ಕಾರ ಅಸ್ತಿತ್ವದಲ್ಲಿದ್ದಾಗ ನಾನೂ ಸಚಿವನಾಗಿದ್ದೆ. ಆಗ ಸಿಂಗ್ ಅವರು ಹಣಕಾಸು ಸಚಿವರಾಗಿದ್ದರು. ನಂತರದಲ್ಲಿ ಪ್ರಧಾನಿಯಾದ ಸಿಂಗ್ 10 ವರ್ಷ ಯುಪಿಎ ಸರ್ಕಾರವನ್ನು ಮುನ್ನಡೆಸಿದ್ದಾರೆ’ ಎಂದು ಪವಾರ್ ಹೇಳಿದ್ದಾರೆ.

ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿಯವರು ತಜ್ಞರ ಜತೆ ಸಮಾಲೋಚನೆ ನಡೆಸಿ ಆರ್ಥಿಕತೆಯನ್ನು ಮುಂದಕ್ಕೊಯ್ಯಬೇಕಿದೆ ಎಂದೂ ಅವರು ಹೇಳಿದ್ದಾರೆ.

‘ನಾವು ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದೇವೆ ಎಂಬುದು ನಮಗೆ ತಿಳಿದಿತ್ತು. ಹಣಕಾಸು ಸಚಿವರಾಗಿ ಮನಮೋಹನ್ ಸಿಂಗ್ ಅವರು ದೇಶಕ್ಕೆ ಹೊಸ ನಿರ್ದೇಶನ ನೀಡಿದ್ದರು. ಅವರು ದೇಶವನ್ನು ಆರ್ಥಿಕ ಬಿಕ್ಕಟ್ಟಿನಿಂದ ಹೊರತಂದಿದ್ದರು’ ಎಂದು ಶಿವಸೇನಾ ಮುಖವಾಣಿ ಸಾಮ್ನಾಗೆ ನೀಡಿದ ಸಂದರ್ಶನದಲ್ಲಿ ಪವಾರ್ ಹೇಳಿದ್ದಾರೆ.

ಆರ್ಥಿಕ ಬಿಕ್ಕಟ್ಟಿನಿಂದ ದೇಶವನ್ನು ಮರಳಿ ಹಳಿಗೆ ತಂದ ಶ್ರೇಯ ನರಸಿಂಹ ರಾವ್ ಮತ್ತು ಸಿಂಗ್, ಇವರಿಬ್ಬರಿಗೂ ಸಲ್ಲಬೇಕು ಎಂದೂ ಅವರು ಹೇಳಿದ್ದಾರೆ. ಭಾರತಕ್ಕೆ ಮತ್ತೊಬ್ಬ ಮನಮೋಹನ್ ಸಿಂಗ್ ಅಗತ್ಯವಿದೆಯೇ ಎಂದು ಕೇಳಲಾದ ಪ್ರಶ್ನೆಗೆ ಅವರು, ‘ಶೇ 100ರಷ್ಟು’ ಎಂದು ಉತ್ತರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು