ಭಾನುವಾರ, ಆಗಸ್ಟ್ 9, 2020
25 °C

ಸಿಬಿಎಸ್ಇ ಪಠ್ಯದಿಂದ ಪೌರತ್ವ, ಜಾತ್ಯತೀತ ಪಾಠ ಕೈಬಿಟ್ಟದ್ದಕ್ಕೆ ಸಿದ್ದರಾಮಯ್ಯ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿಬಿಎಸ್ಇ ಪಠ್ಯಕ್ರಮದಿಂದ ಪೌರತ್ವ, ಜಾತ್ಯತೀತತೆ ಮತ್ತು ಒಕ್ಕೂಟ ವ್ಯವಸ್ಥೆ ಕುರಿತ ಅಧ್ಯಾಯಗಳನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಕೈಬಿಟ್ಟಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. 

ಈ ಬಗ್ಗೆ ಟ್ವೀಟ್‌ ಮೂಲಕ ವಾಗ್ದಾಳಿ ನಡೆಸಿರುವ ಅವರು, 'ಪೌರತ್ವ, ಜಾತ್ಯತೀತತೆ ಮತ್ತು ಒಕ್ಕೂಟ ವ್ಯವಸ್ಥೆ ಕುರಿತ ಅಧ್ಯಾಯಗಳನ್ನು ಸಿಬಿಎಸ್‌ಐ 11ನೇ ತರಗತಿಯ ಪಠ್ಯಕ್ರಮದಿಂದ ಕೈಬಿಡಲಾಗಿದೆ. ಬಿಜೆಪಿಯು ಈ ತತ್ವಗಳನ್ನು ನಂಬುವುದಿಲ್ಲ ಮತ್ತು ತನ್ನ ಹಿಂದಿನ ನಡವಳಿಕೆಗಳನ್ನು ಮೌಲ್ಯೀಕರಿಸುತ್ತದೆ ಎಂಬುದಾಗಿ ಇದು ವಿವರಿಸುತ್ತದೆ' ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದಿರುವ ಅವರು, 'ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಪೌರತ್ವ, ಜಾತ್ಯತೀತತೆ ಮತ್ತು ಸಂಯುಕ್ತ ವ್ಯವಸ್ಥೆ ಕುರಿತ ಅಧ್ಯಾಯಗಳನ್ನು ಕೈಬಿಟ್ಟಿರುವ ನಿರ್ಧಾರವನ್ನು ನಾನು ಖಂಡಿಸುತ್ತೇನೆ. ಪ್ರಜಾಪ್ರಭುತ್ವದ ಆಧಾರ ಸ್ತಂಭಗಳನ್ನು ಅರ್ಥಮಾಡಿಕೊಳ್ಳಲು ಬಯಸುವ ಒಂದು ಪೀಳಿಗೆಯ ವಿದ್ಯಾರ್ಥಿಗಳನ್ನು ಈ ನಿರ್ಧಾರ ವಂಚಿಸಲಿದೆ' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು