ಭಾನುವಾರ, ಜುಲೈ 25, 2021
22 °C

Covid-19 India Update: 24 ಗಂಟೆಗಳಲ್ಲಿ 38,902 ಪ್ರಕರಣಗಳಲ್ಲಿ ಕೋವಿಡ್‌ ದೃಢ

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಕೊರೊನಾ ವೈರಸ್ ಸೋಂಕು ಪರೀಕ್ಷೆ– ಸಂಗ್ರಹ ಚಿತ್ರ

ಬೆಂಗಳೂರು: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್‌–19 ದೃಢಪಟ್ಟ 38,902 ಹೊಸ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿನಿಂದ ದೇಶದಾದ್ಯಂತ 543 ಮಂದಿ ಸಾವಿಗೀಡಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಪ್ರಸ್ತುತ ದೇಶದಲ್ಲಿ 3,73,379 ಸಕ್ರಿಯ ಪ್ರಕರಣಗಳಿದ್ದು, 6,77,423 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಈವರೆಗೂ ದೇಶದಲ್ಲಿ ಒಟ್ಟು 10,77,618 ಕೋವಿಡ್‌ ಪ್ರಕರಣಗಳು ದಾಖಲಾಗಿವೆ ಹಾಗೂ 26,816 ಮಂದಿ ಸೋಂಕಿನ ಕಾರಣಗಳಿಂದ ಮೃತಪಟ್ಟಿದ್ದಾರೆ.

ಜುಲೈ 18ರ ವರೆಗೂ 01,37,91,869 ಮಾದರಿಗಳ ಪರೀಕ್ಷೆ ನಡೆಸಿರುವುದಾಗಿ ಐಸಿಎಂಆರ್‌ ಹೇಳಿದೆ.  

ಮಹಾರಾಷ್ಟ್ರದಲ್ಲಿ ಒಟ್ಟು 3,00,937 ಲಕ್ಷ ಸೋಂಕು ಪ್ರಕರಣಗಳು ದಾಖಲಾಗಿವೆ. ಇದುವರೆಗೆ 11,596  ಮಂದಿ ಮೃತಪಟ್ಟಿದ್ದಾರೆ. 1,23,678  ಸಕ್ರಿಯ ಪ್ರಕರಣಗಳಿದ್ದು, 1,65,663 ಮಂದಿ ಗುಣಮುಖರಾಗಿದ್ದಾರೆ. ರಾಜಧಾನಿ ದೆಹಲಿಯಲ್ಲಿ 16,711 ಸಕ್ರಿಯ ಪ್ರಕರಣಗಳಿದ್ದು, 1,01,274  ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1,21,582 ಲಕ್ಷ ಮಂದಿಗೆ ಸೋಂಕು ಪ್ರಕರಣಗಳು ದಾಖಲಾಗಿವೆ. ಇದುವರೆಗೆ 3,597  ಮಂದಿ ಮೃತಪಟ್ಟಿದ್ದಾರೆ.

ತಮಿಳುನಾಡಿನಲ್ಲಿ 49,455 ಸಕ್ರಿಯ ಪ್ರಕರಣಗಳಿದ್ದು, 1,13,856 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 1,65,714 ಕೋವಿಡ್‌ ಪ್ರಕರಣಗಳ ಪೈಕಿ 2,403 ಮಂದಿ ಸಾವಿಗೀಡಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು