ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19 | ಕಾಶ್ಮೀರದಲ್ಲಿ ಆರು ದಿನಗಳ ಲಾಕ್‌ಡೌನ್‌ ಜಾರಿ

Last Updated 22 ಜುಲೈ 2020, 11:01 IST
ಅಕ್ಷರ ಗಾತ್ರ

ಶ್ರೀನಗರ: ಕೊರೊನಾ ಸೋಂಕು ಹರಡುವುದನ್ನು ತಡೆಯಲು ಜಮ್ಮು ಮತ್ತು ಕಾಶ್ಮೀರ ಆಡಳಿತವು ಬಂಡಿಪೋರ್ ಜಿಲ್ಲೆಯನ್ನು ಹೊರತುಪಡಿಸಿ ಕಾಶ್ಮೀರ ಕಣಿವೆಯಾದ್ಯಂತ ಆರು ದಿನಗಳ ಲಾಕ್‌ಡೌನ್ ವಿಧಿಸಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದರು.

ಬುಧವಾರ ಸಂಜೆಯಿಂದ ಆರು ದಿನಗಳ ಲಾಕ್‌ಡೌನ್‌ ಜಾರಿಯಲ್ಲಿ ಇರಲಿದ್ದು, ಲಾಕ್‌ಡೌನ್‌ ತೆರವಿನ ಬಳಿಕ ಪರಿಸ್ಥಿಯ ಬಗ್ಗೆ ಸಮೀಕ್ಷೆ ನಡೆಸಲಾಗುವುದು ಎಂದು ಅವರು ಹೇಳಿದರು.

ಬುಧವಾರ ಹೊಸದಾಗಿ 502 ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟು 15,258 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT