ಚೆನ್ನೈ/ ಕೋಲ್ಕತ್ತ: ಕೇಂದ್ರ ಸರ್ಕಾರವು ಅನುಮೋದನೆ ನೀಡಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್ಇಪಿ) ವಿರುದ್ಧ ಡಿಎಂಕೆ ಅಧ್ಯಕ್ಷ ಎಂ.ಕೆ.ಸ್ಟಾಲಿನ್ ಕಿಡಿ ಕಾರಿದ್ದಾರೆ.

‘ಎನ್ಇಪಿ ಮೂಲಕ ಕೇಂದ್ರ ಸರ್ಕಾರವು ಹಿಂದಿ ಮತ್ತು ಸಂಸ್ಕೃತ ಭಾಷೆಗಳನ್ನು ಹೇರುವ ಕೆಲಸ ಮಾಡುತ್ತಿದೆ. ಈ ನೀತಿಯನ್ನು ಖಂಡಿಸಿ, ಸಮಾನ ಮನಸ್ಕ ಪಕ್ಷಗಳು ಹಾಗೂ ಮುಖ್ಯಮಂತ್ರಿಗಳೆಲ್ಲಾ ಸೇರಿ ಹೋರಾಡುತ್ತೇವೆ’ ಎಂದು ಅವರು ಹೇಳಿದ್ದಾರೆ.

‘ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಜಾರಿಯಲ್ಲಿದ್ದ 10+2 ಶಿಕ್ಷಣ ಪದ್ಧತಿ ಯಶಸ್ವಿಯಾಗಿತ್ತು. ಅದರ ಬದಲು 5+3+3+4 ಶಿಕ್ಷಣ ಪದ್ಧತಿಗೆ ಒಪ್ಪಿಗೆ ನೀಡುವ ಮೂಲಕ ಮಕ್ಕಳ ಮನಸ್ಸಿನ ಮೇಲೆ ದಾಳಿ ನಡೆಸಲು ಪ್ರಯತ್ನಿಸಲಾಗುತ್ತಿದೆ. ಸರ್ಕಾರದ ತೀರ್ಮಾನಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿವೆ’ ಎಂದು ಅವರು ಪಕ್ಷದ ಸದಸ್ಯರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ: ಪಶ್ಚಿಮ ಬಂಗಾಳದ ಶಿಕ್ಷಣ ಸಚಿವ ಪಾರ್ಥ ಚಟರ್ಜಿ ಅವರು ಸಹ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ನೀತಿಯನ್ನು ರೂಪಿಸುವಾಗ ರಾಜ್ಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಇದು ಪಾಶ್ಚಿಮಾತ್ಯ ಮಾದರಿಯ ನಕಲು ಎಂದು ಹೇಳಿದ್ದಾರೆ.ಈ ನೀತಿಗೆ ಸಂಸತ್ತಿನ ಅನುಮೋದನೆ ಪಡೆದುಕೊಂಡಿಲ್ಲ. ಇದೊಂದು ಏಕಪಕ್ಷೀಯ ನೀತಿಯಾಗಿದೆ ಎಂದು ಟೀಕಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.